Asian Games : ಏಷ್ಯನ್ ಗೇಮ್ಸ್ ನಲ್ಲಿ ಪದಕ ಗೆದ್ದ ಕರ್ನಾಟಕದ ಕ್ರೀಡಾಪಟುಗಳಿಗೆ ನಗದು ಪುರಸ್ಕಾರ ನೀಡಿದ ಸಿಎಂ ಸಿದ್ದರಾಮಯ್ಯ
ಚೀನಾದಲ್ಲಿ ನಡೆದ 19ನೇ ಏಷ್ಯನ್ ಗೇಮ್ಸ್‌ನಲ್ಲಿ ಪದಕ ಪಡೆದ ರಾಜ್ಯದ ಕ್ರೀಡಾಪಟುಗಳು ಮತ್ತು ತರಬೇತುದಾರರನ್ನು ಅವರು ಇಂದು ಗೃಹ ಕಚೇರಿ ಕೃಷ್ಣಾದಲ್ಲಿ ಸನ್ಮಾನಿಸಿ, ನಗದು ಪುರಸ್ಕಾರ ಪ್ರದಾನ ಮಾಡಿ ಮಾತನಾಡಿದರು. ದೇಶ ಮತ್ತು ರಾಜ್ಯದ ಗೌರವ ಹೆಚ್ಚು ಮಾಡಿದ್ದೀರಿ. ಸಮಸ್ತ ಕನ್ನಡಿಗರಿಗೆ ಹೆಮ್ಮೆಯ ವಿಷಯ. ಈ ಬಾರಿ ಚೀನಾದಲ್ಲಿ ನಡೆದ ಏಷ್ಯನ್ ಗೇಮ್ಸ್‌ನಲ್ಲಿ ಭಾರತೀಯ ಕ್ರೀಡಾಪಟುಗಳು ಅತ್ಯಧಿಕ ಪದಕಗಳನ್ನು ಗೆದ್ದಿದ್ದಾರೆ. ಕಳೆದ ಬಾರಿ 70, ಈ ಬಾರಿ 107 ಪದಕ ಗೆದ್ದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇಡೀ ಜಗತ್ತಿನಲ್ಲಿ ಜನಸಂಖ್ಯೆಯಲ್ಲಿ ಭಾರತ ಮೊದಲ ಸ್ಥಾನದಲ್ಲಿದೆ. ಏಷ್ಯನ್ ಗೇಮ್ಸ್‌ನಲ್ಲಿಯೂ ಮೊದಲ-ಎರಡನೇ ಸ್ಥಾನ ಬಂದರೆ ಗೌರವ ಹೆಚ್ಚಾಗುತ್ತದೆ ಎಂದು ಅವರು ಅಭಿಪ್ರಾಯಪಟ್ಟರು.