Bengaluru Rains; ರಾತ್ರಿ ವೇಳೆ ಸುರಿದ ಮಳೆಗೆ ಹೈರಾಣಾಯಿತು ಬೆಂಗಳೂರು, ಹೆಚ್ಚಾಯಿತು ಸೋಮವಾರದ ಸಂಚಾರ ದಟ್ಟಣೆಯ ಕಿರಿಕಿರಿ- Video
ಬೆಂಗಳೂರು: ಕರ್ನಾಟಕದ ರಾಜಧಾನಿ ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಮಳೆ ಸುರಿದಿದ್ದು, ಅನೇಕ ಕಡೆ ಸಂಚಾರ ಅಸ್ತವ್ಯಸ್ತವಾಗಿದೆ. ಜನಜೀವನವೂ ಸಂಕಷ್ಟಕ್ಕೆ ಒಳಗಾಗಿದೆ. ಬೆಂಗಳೂರು ಸಂಚಾರ ಪೊಲೀಸರು ನೀಡಿರುವ ಮಾಹಿತಿ ಪ್ರಕಾರ, ಬೆಂಗಳೂರಿನಲ್ಲಿ ನಿನ್ನೆ ರಾತ್ರಿ ಸುರಿದ ಭಾರಿ ಮಳೆಯ ಕಾರಣ ಹಲವೆಡೆ ಸಂಚಾರ ದಟ್ಟಣೆ ಕಂಡುಬಂದಿದೆ. ಓಕಳಿಪುರ, ರಾಜಾಜಿನಗರ, ಮಲ್ಲೇಶ್ವರ, ಕೆ ಆರ್ ಮಾರ್ಕೇಟ್, ಬಿಟಿಎಂ ಲೇಔಟ್ ಸೇರಿ ವಿವಿಧ ಪ್ರದೇಶಗಳು ಜಲಾವೃತವಾಗಿವೆ. ಅಂಡರ್ ಪಾಸ್ ಗಳಲ್ಲಿ ನೀರು ನಿಂತಿದ್ದು ವಾಹನ ಸಂಚಾರ ಕಷ್ಟವಾಗಿದೆ. ಕೆ ಆರ್ ಮಾರುಕಟ್ಟೆಯಲ್ಲಿ ವ್ಯಾಪಾರಿಗಳು ತೊಂದರೆಗೀಡಾಗಿದ್ದು, ಬೆಳಗ್ಗೆ ನಡೆಯಬೇಕಾಗಿದ್ದ ಹೂವಿನ ವ್ಯಾಪಾರ ಸರಿಯಾಗಿ ನಡೆಯದೆ ಹೂ ಕೃಷಿಕರಿಗೆ, ವ್ಯಾಪಾರಿಗಳಿಗೆ ನಷ್ಟ ಉಂಟಾಗಿದೆ.