ಅಜ್ಜಿ ಇಂದಿರಾಗಾಂಧಿಗಾದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗಾಂಧಿಗೆ ಬಿಜೆಪಿ‌ ಬೆದರಿಕೆ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಅಜ್ಜಿ ಇಂದಿರಾಗಾಂಧಿಗಾದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗಾಂಧಿಗೆ ಬಿಜೆಪಿ‌ ಬೆದರಿಕೆ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

ಅಜ್ಜಿ ಇಂದಿರಾಗಾಂಧಿಗಾದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್ ಗಾಂಧಿಗೆ ಬಿಜೆಪಿ‌ ಬೆದರಿಕೆ ಹಾಕಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Published Sep 18, 2024 07:09 PM IST Umesh Kumar S
twitter
Published Sep 18, 2024 07:09 PM IST

ಬೆಂಗಳೂರು: ರಾಹುಲ್ ಗಾಂಧಿಯವರನ್ನು ಮುಗಿಸಲು ಬಿಜೆಪಿ ಸಂಚು ನಡೆಸುತ್ತಿದೆ.. ಆದರೆ ತ್ಯಾಗ ಬಲಿದಾನದ ಸಂಸ್ಕೃತಿ ಮತ್ತು ಹುತಾತ್ಮರ ಕುಟುಂಬದಿಂದ ಬಂದ ರಾಹುಲ್ ಗಾಂಧಿ ಅವರು ಇದಕ್ಕೆಲ್ಲಾ ಹೆದರುವವರಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. 

ಇಂಧಿರಾಗಾಂಧಿ, ರಾಜೀವ್ ಗಾಂಧಿ ದೇಶಕ್ಕಾಗಿ ಹುತಾತ್ಮರಾಗಿದ್ದಾರೆ. ಇಂಥಾ ಉನ್ನತ ತ್ಯಾಗ ಬಲಿದಾನದ ಕುಟುಂಬದಿಂದ ಬಂದು ರಾಹುಲ್ ಗಾಂಧಿ ಅವರು ದೇಶಕ್ಕಾಗಿ ಅವಿರತ ಹೋರಾಟ ನಡೆಸುತ್ತಿದ್ದಾರೆ. ಅಜ್ಜಿ ಇಂದಿರಾಗಾಂಧಿ ಅವರಿಗೆ ಆದ ಗತಿಯೇ ನಿಮಗೂ ಆಗುತ್ತದೆ ಎಂದು ರಾಹುಲ್‌ಗೆ ಬಿಜೆಪಿ‌ ಬೆದರಿಕೆ ಹಾಕಿದೆ . ರಾಹುಲ್ ಗಾಂಧಿ ಅವರನ್ನು ಭಯೋತ್ಪಾದಕ ಎಂದು ಕೇಂದ್ರದ ರೈಲ್ವೆ ಖಾತೆ ರಾಜ್ಯ ಸಚಿವ ಕರೆದಿದ್ದಾರೆ. ಈ ರೀತಿ ಜೀವ ಬೆದರಿಕೆಗಳ ಮೂಲಕ ಬಿಜೆಪಿಯ ಕಾರ್ಯಕರ್ತರನ್ನು ಎತ್ತಿಕಟ್ಟುವ ಷಡ್ಯಂತ್ರ ನಡೆಯುತ್ತಿದೆ. ರಾಹುಲ್ ಗಾಂಧಿ ನಾಲಗೆ ಕತ್ತರಿಸಿದವರಿಗೆ 11 ಲಕ್ಷ ರೂಪಾಯಿ ಬಹುಮಾನ‌ ಕೊಡುವುದಾಗಿ ಶಿವಸೇನೆಯ ಶಿಂಧೆ ಬಣದ ಶಾಸಕ ಸಂಜಯ್ ಗಾಯಕ್ ವಾಡ್ ಅವರು ರಾಹುಲ್ ಗಾಂಧಿ ನಾಲಗೆ ಕತ್ತರಿಸಲು ಕರೆ ನೀಡಿದ್ದಾರೆ. ಇದೂ ಕೂಡ ಕೊಲೆ ಬೆದರಿಕೆಯೇ ಆಗಿದ್ದು ಇವರ ವಿರುದ್ಧ ಕ್ರಮವಾಗಬೇಕೆಂದು ಸಿಎಂ ಆಗ್ರಹಿಸಿದ್ದಾರೆ. 

More