Krishna Byre Gowda; ಎಷ್ಟು ದಪ್ಪ ಕಾಣಿಸ್ತಾ ಇದೇರಿ ನನ್ನ ಕಿವಿಯಲ್ಲಿ ದಾಸವಾಳ ಹೂವ; ತುಮಕೂರು ಎಸಿಗೆ ಸಚಿವ ಕೃಷ್ಣ ಬೈರೇ ಗೌಡ ಛೀಮಾರಿ-bengaluru news revenue minister krishna byre gowda criticizes officials in ac court meeting video goes viral uks ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Krishna Byre Gowda; ಎಷ್ಟು ದಪ್ಪ ಕಾಣಿಸ್ತಾ ಇದೇರಿ ನನ್ನ ಕಿವಿಯಲ್ಲಿ ದಾಸವಾಳ ಹೂವ; ತುಮಕೂರು ಎಸಿಗೆ ಸಚಿವ ಕೃಷ್ಣ ಬೈರೇ ಗೌಡ ಛೀಮಾರಿ

Krishna Byre Gowda; ಎಷ್ಟು ದಪ್ಪ ಕಾಣಿಸ್ತಾ ಇದೇರಿ ನನ್ನ ಕಿವಿಯಲ್ಲಿ ದಾಸವಾಳ ಹೂವ; ತುಮಕೂರು ಎಸಿಗೆ ಸಚಿವ ಕೃಷ್ಣ ಬೈರೇ ಗೌಡ ಛೀಮಾರಿ

Aug 23, 2024 08:18 PM IST Umesh Kumar S
twitter
Aug 23, 2024 08:18 PM IST

ಬೆಂಗಳೂರು: ದುಡ್ಡು ಮಾಡೋಕೆ ಎಲೆಕ್ಷನ್ ಅಡ್ಡ ಬರಲ್ಲ, ಆದ್ರೆ ಜನರ ಕೆಲಸ ಮಾಡೋಕೆ ಮಾತ್ರ ಎಲೆಕ್ಷನ್ ಅಡ್ಡ ಬರುತ್ತಾ..? ಕೋರ್ಟ್‌ನಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸಿ ಅಂದ್ರೆ ಎಲೆಕ್ಷನ್‌ ಕೆಲಸ ಇತ್ತು ಅಂತ ಸಾಬೂಬು ಹೇಳ್ತೀರ ಎಂದು ಉಪ ವಿಭಾಗಾಧಿಕಾರಿಗಳನ್ನು (ಎಸಿ) ಸಚಿವ ಕೃಷ್ಣ ಬೈರೇಗೌಡ ಅವರು ತರಾಟೆಗೆ ತೆಗೆದುಕೊಂಡರು. 

ಎಸಿ ನ್ಯಾಯಾಲಯಗಳಲ್ಲಿ ಹೆಚ್ಚು ಸಂಖ್ಯೆಯಲ್ಲಿ ತಕರಾರು ಪ್ರಕರಣಗಳನ್ನು ಇತ್ಯರ್ಥಗೊಳಿಸದೆ ಬಾಕಿ ಉಳಿಸಿಕೊಂಡಿರುವ ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ತುಮಕೂರು, ಕೊಪ್ಪಳ, ಮೈಸೂರು, ಮಂಗಳೂರು ಹಾಗೂ ಬೆಳಗಾವಿ ಜಿಲ್ಲೆಗಳ ಆಯ್ದ 30 ಉಪ-ವಿಭಾಧಿಕಾರಿಗಳು ಹಾಗೂ ವಲಯ ಆಯುಕ್ತರ ಜೊತೆ ಇಂದು ವಿಕಾಸಸೌಧದಲ್ಲಿ ಶುಕ್ರವಾರ ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಲಾಯಿತು. 

ಈ ವೇಳೆ ಉಪ-ವಿಭಾಗಾಧಿಕಾರಿಗಳ ನ್ಯಾಯಾಲಯದಲ್ಲಿ ಬಾಕಿ ಇರುವ ತಕರಾರು ಪ್ರಕರಣಗಳ ಇತ್ಯರ್ಥಕ್ಕೆ ಮುಂದಾಗದ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡ ಸಚಿವ ಕೃಷ್ಣ ಬೈರೇಗೌಡ ಅವರು, “ಹಲವು ವರ್ಷಗಳಿಂದ ಎಸಿ ನ್ಯಾಯಾಲಯಗಳಿಗೆ ಅಲೆದಾಡಿ ಜನ ಬಸವಳಿಸಿದ್ದಾರೆ. ಹೀಗಾಗಿ ಬಾಕಿ ಇರುವ ಎಲ್ಲಾ ಪ್ರಕರಣಗಳನ್ನು ಶೀಘ್ರ ಇತ್ಯರ್ಥಗೊಳಿಸಬೇಕು ಎಂದು ನಾವು ಕಳೆದ ಒಂದು ವರ್ಷದಿಂದ ರಾಜ್ಯಾದ್ಯಂತ ಓಡಾಡಿ ಸಭೆ ನಡೆಸಿ ಎಲ್ಲಾ ಅಧಿಕಾರಿಗಳಿಗೂ ಗುರಿ ನಿಗದಿ ಮಾಡಲಾಗಿದೆ. ಆದರೆ, ಕಳೆದ ಮಾರ್ಚ್‌ನಿಂದ ಪ್ರಕರಣ ವಿಲೇವಾರಿ ಕೆಲಸ ಮತ್ತೆ ನಿಂತ ನೀರಾಗಿದೆ” ಎಂದ ತೀವ್ರ ಅಸಮಾಧಾನ ಹೊರಹಾಕಿದರು.

More