ಕಾರ್ಯಕರ್ತರ ಜೊತೆ ನಿಖಿಲ್ ಕುಮಾರಸ್ವಾಮಿ ಜಾಗ್ವಾರ್ ಓಟ: ಮೂರನೇ ದಿನದ ಮೈಸೂರು ಚಲೋ ವಿಡಿಯೊ
- ಕಾಂಗ್ರೆಸ್ ಸರ್ಕಾರದ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಖಂಡಿಸಿ ಬಿಜೆಪಿ, ಜೆಡಿಎಸ್ ಮೈತ್ರಿ ನಾಯಕರು ನಡೆಸುತ್ತಿರುವ ಪಾದಯಾತ್ರೆ ಮೂರನೇ ದಿನಕ್ಕೆ ಕಾಲಿಟ್ಟಿದೆ. ರಾಮನಗರ ಜಿಲ್ಲೆಯಲ್ಲಿ ಸಾಗುತ್ತಿದ್ದಾಗ ಈ ಯಾತ್ರೆಯಲ್ಲಿ ಉಭಯ ಪಕ್ಷಗಳ ನಾಯಕರು ಭಾಗವಹಿಸಿದ್ದಾರೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ ಹೆಚ್ ಡಿ ಕುಮಾರಸ್ವಾಮಿ, ಎಲ್ಲದಕ್ಕೂ ಕಾಲ ಉತ್ತರ ನೀಡಲಿದೆ ಎಂದಿದ್ದಾರೆ. ಮೈಸೂರು ಚಲೋ ಪಾದಯಾತ್ರೆ ಒಟ್ಟು 8 ದಿನಗಳ ಕಾಲ ನಡೆಯಲಿದ್ದು ಮೈಸೂರಿನಲ್ಲಿ ಸಮಾರೋಪ ನಡೆಯಲಿದೆ. ಪಾದಯಾತ್ರೆಯಲ್ಲಿ ಜೆಡಿಎಸ್ ಯುವ ನಾಯಕ ನಿಖಿಲ್ ಕುಮಾರಸ್ವಾಮಿ ಅವರು ವೇಗದ ಓಟ ಗಮನ ಸೆಳೆಯಿತು.