Ponniyin Selvan 2: ಪೊನ್ನಿಯಿನ್ ಸೆಲ್ವನ್ 2 ತೆರೆಗೆ ಮೂರು ದಿನಗಳಷ್ಟೇ ಬಾಕಿ; ಮುಂಬೈ ಪ್ರೀ ರಿಲೀಸ್ ಕಾರ್ಯಕ್ರಮದಲ್ಲಿ ಭಾಗಿಯಾದ ಚಿತ್ರತಂಡ
- ಬಹುತಾರಾಗಣದ, ಬಹುನಿರೀಕ್ಷಿತ ಪ್ಯಾನ್ ಇಂಡಿಯಾ ಸಿನಿಮಾ ಪೊನ್ನಿಯಿನ್ ಸೆಲ್ವನ್ 2 ಸಿನಿಮಾ ಏಪ್ರಿಲ್ 28ರಂದು ತೆರೆ ಕಾಣುತ್ತಿದೆ. ಸಿನಿಮಾವನ್ನು ಲೈಕಾ ಪ್ರೊಡಕ್ಷನ್ಸ್ ಬ್ಯಾನರಾ ಅಡಿ ಮಣಿರತ್ನಂ ನಿರ್ದೇಶಿಸಿದ್ದಾರೆ. ಚಿತ್ರತಂಡ ಸದ್ಯಕ್ಕೆ ಪ್ರಮೋಷನ್ ಕೆಲಸಗಳಲ್ಲಿ ಬ್ಯುಸಿ ಇದೆ. ಮಂಗಳವಾರ ಮುಂಬೈನಲ್ಲಿ ನಡೆದ ಪ್ರೀ ರಿಲೀಸ್ ಈವೆಂಟ್‌ನಲ್ಲಿ ನಿರ್ದೇಶಕ ಮಣಿರತ್ನಂ, ಮಾಜಿ ವಿಶ್ವಸುಂದರಿ, ಬಾಲಿವುಡ್ ನಟಿ ಐಶ್ವರ್ಯ ರೈ ಸೇರಿದಂತೆ ಚಿತ್ರತಂಡ ಎಲ್ಲಾ ಸದಸ್ಯರು ಭಾಗವಹಿಸಿದ್ದರು.