CM Siddaramiah: ಚಾಮರಾಜನಗರ ಸಾಮೂಹಿಕ ವಿವಾಹ ಕಾರ್ಯಕ್ರಮದಲ್ಲಿ ಮದುಮಕ್ಕಳನ್ನು ಆಶೀರ್ವದಿಸಿದ ಸಿಎಂ ಸಿದ್ದರಾಮಯ್ಯ
ಸಾಲ ಮಾಡಿ ಅದ್ದೂರಿ ಮದುವೆ ಮಾಡುವುದು ಆರ್ಥಿಕವಾಗಿ ಅನಾರೋಗ್ಯಕರ ವಿಚಾರ. ವ್ಯವಸಾಯಕ್ಕೆಂದು ಸಾಲ ಮಾಡಿ ಮದುವೆ ಆಗಬೇಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ ದೇವಸ್ಥಾನದ ರಂಗಮಂದಿರದಲ್ಲಿ ಆಯೋಜಿಸಿದ್ದ ಸಾಮೂಹಿಕ ಸರಳ ವಿವಾಹ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಬಡವರು ಮತ್ತು ಮಧ್ಯಮ ವರ್ಗದವರು ಸಾಲ ಮಾಡಿ ಮದುವೆಯಾದರೆ, ಜೀವನ ಪರ್ಯಂತ ಸಾಲ ತೀರಿಸುತ್ತಾ ಕೂರಬೇಕಾಗುತ್ತದೆ. ಆದ್ದರಿಂದ ಸರಳ ಮತ್ತು ಸಾಮೂಹಿಕ ವಿವಾಹಗಳು ಹೆಚ್ಚೆಚ್ಚು ನಡೆಯಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.