23ರಂದು ಚುನಾವಣೆ ಫಲಿತಾಂಶ ಬರಲಿ, ಎಲ್ಲಾ ಆರೋಪಕ್ಕೆ ಉತ್ತರ ಕೊಡುವೆ; ಕಾಂಗ್ರೆಸ್‌ ವಿರುದ್ದ ಚಾಟಿ ಬೀಸಿದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  23ರಂದು ಚುನಾವಣೆ ಫಲಿತಾಂಶ ಬರಲಿ, ಎಲ್ಲಾ ಆರೋಪಕ್ಕೆ ಉತ್ತರ ಕೊಡುವೆ; ಕಾಂಗ್ರೆಸ್‌ ವಿರುದ್ದ ಚಾಟಿ ಬೀಸಿದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ

23ರಂದು ಚುನಾವಣೆ ಫಲಿತಾಂಶ ಬರಲಿ, ಎಲ್ಲಾ ಆರೋಪಕ್ಕೆ ಉತ್ತರ ಕೊಡುವೆ; ಕಾಂಗ್ರೆಸ್‌ ವಿರುದ್ದ ಚಾಟಿ ಬೀಸಿದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ

Published Oct 29, 2024 04:24 PM IST Rakshitha Sowmya
twitter
Published Oct 29, 2024 04:24 PM IST

ಹಾವೇರಿ ಜಿಲ್ಲೆಯ ಶಿಗ್ಗಾಂವಿ, ರಾಮನಗರ ಜಿಲ್ಲೆಯ ಚನ್ನಪಟ್ಟಣ ಮತ್ತು ಬಳ್ಳಾರಿ ಜಿಲ್ಲೆಯ ಸಂಡೂರು ಕ್ಷೇತ್ರಗಳಿಗೆ ನವೆಂಬರ್ 13ರಂದು ಮತದಾನ ನಡೆಯುತ್ತಿದ್ದು 23ರಂದು ಫಲಿತಾಂಶ ಪ್ರಕಟವಾಗುತ್ತಿದೆ. ಅದರಲ್ಲಿ ಚನ್ನಪಟ್ಟಣ ವಿಧಾನಸಭೆ ಚುನಾವಣೆ ಭಾರೀ ಸದ್ದು ಮಾಡುತ್ತಿದೆ. ಚನ್ನಪಟ್ಟಣ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್‌ ಕುಮಾರಸ್ವಾಮಿ ಚುನಾವಣಾ ಅಖಾಡಕ್ಕೆ ಇಳಿದಿದ್ದು ಪ್ರಚಾರ ಕಾರ್ಯ ಭರದಿಂದ ಸಾಗಿದೆ. ಚುನಾವಣೆ ಬಗ್ಗೆ ಮಾತನಾಡಿದ ಮಾಜಿ ಸಿಎಂ ಹೆಚ್‌ಡಿ ಕುಮಾರಸ್ವಾಮಿ, ನನ್ನ ಮೇಲೆ ಎದುರಾಳಿಗಳು ಹಲವಾರು ಆಪಾದನೆ ಮಾಡಿದ್ದಾರೆ. ಎಲ್ಲವನ್ನೂ ಬರೆದಿಟ್ಟುಕೊಂಡಿದ್ದೇನೆ. 23ನೇ ತಾರೀಖು ಚುನಾವಣೆ ಫಲಿತಾಂಶ ಮುಗಿದ ನಂತರ ಎಲ್ಲದಕ್ಕೂ ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ.

More