ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ಸೈಟ್‌ಗೂ ನಮಗೂ ಸಂಬಂಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ಸೈಟ್‌ಗೂ ನಮಗೂ ಸಂಬಂಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

ಜಾರಿ ನಿರ್ದೇಶನಾಲಯ ಮುಟ್ಟುಗೋಲು ಹಾಕಿಕೊಂಡಿರುವ ಸೈಟ್‌ಗೂ ನಮಗೂ ಸಂಬಂಧವಿಲ್ಲ: ಮುಖ್ಯಮಂತ್ರಿ ಸಿದ್ದರಾಮಯ್ಯ

Jan 21, 2025 02:47 PM IST Rakshitha Sowmya
twitter
Jan 21, 2025 02:47 PM IST

ಜಾರಿ ನಿರ್ದೇಶನಾಲಯವು ಮುಡಾ ನಿವೇಶನಗಳನ್ನು ಜಪ್ತಿ ಮಾಡಿರುವ ಬಗ್ಗೆ ಹಾಗೂ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದಾರೆ. ಸೋಮವಾರ ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇಡಿ ಅಧಿಕಾರಿಗಳ ಪತ್ರಿಕಾ ಪ್ರಕಟಣೆಗೂ ನನಗೂ ಯಾವುದೇ ಸಂಬಂಧವಿಲ್ಲ, ರಾಜಕೀಯ ಉದ್ದೇಶದಿಂದಲೇ ತನಿಖೆ ಮಾಡುತ್ತಿದ್ದಾರೆ. ಅವರು ಮುಟ್ಟುಗೋಲು ಹಾಕಿಕೊಂಡಿರುವ ಸೈಟ್‌ಗಳಿಗೂ ನಮಗೂ ಯಾವುದೇ ಸಂಬಂಧವಿಲ್ಲ. ಬಿಜೆಪಿಯವರು ಅನಗತ್ಯವಾಗಿ ಇಡಿ ಮೂಲಕ ಪತ್ರಿಕಾ ಪ್ರಕಟಣೆಯನ್ನು ಬಿಡುಗಡೆಗೊಳಿಸಿದ್ದಾರೆ ಎಂದಿದ್ದಾರೆ. ಮೈಸೂರು ಭಾಗದಲ್ಲಿ ಹೆಚ್ಚಾಗಿರುವ ಮೈಕ್ರೋ ಫೈನಾನ್ಸ್‌ ದಂಧೆ ಬಗ್ಗೆ ಮಾತನಾಡಿದ ಸಿಎಂ, ಸಂಸ್ಥೆ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದಿದ್ದಾರೆ.

More