Mysore : ಕಾವೇರಿ ವಿಚಾರದಲ್ಲಿ ಬಿಜೆಪಿ ಜೆಡಿಎಸ್ ರಾಜಕಾರಣ ಮಾಡುತ್ತಿದೆ, ಜನರ ಹಿತದೃಷ್ಟಿಯಿಂದ ಅಲ್ಲ - ಸಿಎಂ
ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಕಾವೇರಿ ವಿಷಯವನ್ನು ರಾಜಕೀಯ ಗೊಳಿಸುತ್ತಿರುವುದು ರಾಜಕಾರಣಕ್ಕೆ ಹೊರತು ಜನರ ಹಾಗೂ ನಾಡಿನ ಹಿತದೃಷ್ಟಿಯಿಂದ ಮಾಡುತ್ತಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಮಾತನಾಡಿದ ಅವರು, ಬಂದ್ ಮಾಡಲು ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವಕಾಶವಿದೆ. ಆದರೆ ನ್ಯಾಯಾಲಯ ಯಾವುದೇ ಸಭೆ, ಮೆರವಣಿಗೆಯನ್ನು ನಡೆಸಬಾರದು, ಪ್ರತಿಭಟನೆ ಮಾಡಬಾರದು ಎಂದು ಹೇಳಿದೆ. ನಾವು ನಮ್ಮ ಮೂಲಭೂತ ಹಕ್ಕುಗಳನ್ನು ಚಲಾಯಿಸುವಾಗ ಇತರರ ಮೂಲಭೂತ ಹಕ್ಕುಗಳನ್ನು ಕೂಡ ಗಮನದಲ್ಲಿರಿಸಿಕೊಳ್ಳಬೇಕು ಎಂದರು. ಇನ್ನು ಜನರು ಕಾನೂನನ್ನು ಕೈಗೆತ್ತಿಕೊಳ್ಳಬಾರದು ಎಂದು, ಜನರಿಗೆ ತೊಂದರೆಯಾಗಬಾರದೆಂದು 144 ಸೆಕ್ಷನ್ ಜಾರಿ ಮಾಡಲಾಗಿದೆ. ರಾಜ್ಯದ ಹಾಗೂ ಜನತೆಯ ಹಿತದೃಷ್ಟಿಯಿಂದ ಆದೇಶ ಮಾಡಲಾಗಿದೆ ಎಂದರು.