cm siddaramaiah Bangalore rounds : ಮಳೆಯಿಂದ ಹಾನಿಗೀಡ ಪ್ರದೇಶಗಳಿಗೆ ಸಿಎಂ ಸಿದ್ದರಾಮಯ್ಯ ರೌಂಡ್ಸ್ – ಖಡಕ್ ಸೂಚನೆ
ನಾನಾ ಕಾಮಗಾರಿ ಮತ್ತು ಮಳೆಯಿಂದ ಸಮಸ್ಯೆಗಳಿಗೆ ಒಳಗಾಗುವ ಪ್ರದೇಶಗಳಿಗೆ ಸಿಎಂ ಮತ್ತು ಡಿಸಿಎಂ ಅಧಿಕಾರಿಗೊಳಂದಿಗೆ ಭೇಟಿ ಮಾಡಿದ್ದಾರೆ. ಗಾಳಿ ಆಂಜನೇಯ ದೇವಸ್ಥಾನ ಸಮೀಪದ ರಾಜಕಾಲುವೆಯಲ್ಲಿ ಮಳೆಗಾಲದಲ್ಲಿ ಪ್ರವಾಹ ಉಂಟಾಗುತ್ತಿದ್ದು ಅದಕ್ಕೆ ಸಮಾನಾಂತರವಾಗಿ ಇನ್ನೊಂದು ಕಾಲುವೆ ನಿರ್ಮಿಸುವುದರಿಂದ ಪ್ರವಾಹ ತಗ್ಗಿಸಬಹುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಮುಖ್ಯಮಂತ್ರಿಗಳಿಗೆ ವಿವರಿಸಿದರು. ಪ್ರವಾಹ ನಿಯಂತ್ರಣ ಕಾಮಗಾರಿಗೆ 11.5 ಕೋಟಿ ರೂ. ಅಂದಾಜು ವೆಚ್ಚದ ಯೋಜನೆ ರೂಪಿಸಲಾಗಿದ್ದು, ಈ ಕಾಮಗಾರಿಯನ್ನು ಕೂಡಲೇ ಕೈಗೆತ್ತಿಕೊಳ್ಳುವಂತೆ ಮುಖ್ಯಮಂತ್ರಿಗಳು ಸೂಚಿಸಿದರು. ಈ ರಾಜಕಾಲುವೆಗೆ ಸಾರ್ವಜನಿಕರು ಕಸ ಎಸೆಯುವುದನ್ನು ತಡೆಗಟ್ಟಲು ಕ್ರಮ ವಹಿಸುವಂತೆ ಸೂಚಿಸಿದರು.