ಬಿಜೆಪಿಯ ಪಾದಯಾತ್ರೆಗೆ ಸಿಎಂ ಸಿದ್ದರಾಮಯ್ಯ ತಿರುಗೇಟು; ಮೈಸೂರಿನಲ್ಲಿ ಹೇಗಿತ್ತು ಬೃಹತ್ ಜನಾಂದೋಲನ ಸಭೆ
- ಮೂಡಾ ಪ್ರಕರಣದ ತನಿಖೆಗೆ ಒತ್ತಾಯಿಸಿ ಬಿಜೆಪಿ ನಾಯಕರು ಮೈಸೂರು ಚಲೋ ಯಾತ್ರೆಯನ್ನ ಯಶಸ್ವಿಯಾಗಿ ಪೂರೈಸಿದ್ದಾರೆ. ಸಿದ್ದರಾಮಯ್ಯ ರಾಜೀನಾಮೆ ಕೊಡಬೇಕು ಹಾಗೂ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿರುವ ಕೇಸರಿ ನಾಯಕರಿಗೆ ಕಾಂಗ್ರೆಸ್ ತಿರುಗೇಟು ನೀಡಿದೆ. ಮೈಸೂರಿನಲ್ಲಿ ಜನಾಂದೋಲನ ಸಭೆ ನಡೆಸಿರುವ ಕಾಂಗ್ರೆಸ್, ಬಿಜೆಪಿಗೆ ತಿರುಗೇಟು ನೀಡಿದೆ. ಈ ವೇಳೆ ಸಿಎಂ ಸಿದ್ದರಾಮಯ್ಯ ಅವರು ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಸಿದ್ದಾರೆ.