ಬಾಬಾ ಸಾಹೇಬ್ ಅಂಬೇಡ್ಕರ್ ತಮ್ಮ ಸ್ವಾರ್ಥಕ್ಕಾಗಿ ಓದಲಿಲ್ಲ, ಅವರ ಆದರ್ಶವನ್ನ ಸರ್ಕಾರ ಪಾಲಿಸುತ್ತದೆ: ಸಿಎಂ ಸಿದ್ದರಾಮಯ್ಯ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಬಾಬಾ ಸಾಹೇಬ್ ಅಂಬೇಡ್ಕರ್ ತಮ್ಮ ಸ್ವಾರ್ಥಕ್ಕಾಗಿ ಓದಲಿಲ್ಲ, ಅವರ ಆದರ್ಶವನ್ನ ಸರ್ಕಾರ ಪಾಲಿಸುತ್ತದೆ: ಸಿಎಂ ಸಿದ್ದರಾಮಯ್ಯ

ಬಾಬಾ ಸಾಹೇಬ್ ಅಂಬೇಡ್ಕರ್ ತಮ್ಮ ಸ್ವಾರ್ಥಕ್ಕಾಗಿ ಓದಲಿಲ್ಲ, ಅವರ ಆದರ್ಶವನ್ನ ಸರ್ಕಾರ ಪಾಲಿಸುತ್ತದೆ: ಸಿಎಂ ಸಿದ್ದರಾಮಯ್ಯ

Published Apr 14, 2025 04:01 PM IST Manjunath B Kotagunasi
twitter
Published Apr 14, 2025 04:01 PM IST

  • ಅಂಬೇಡ್ಕರ್ ಪ್ರತಿಪಾದಿಸಿದ್ದ ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮಂತ್ರ ಅನುಸರಿಸುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಅವರು ಬಯಸಿದಂತಹ ಸಮಾಜವನ್ನು ನಿರ್ಮಾಣ ಮಾಡಲು ಪ್ರಾಮಾಣಿಕ ಪ್ರಯತ್ನ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು (ಏ. 14) ಸಂವಿಧಾನ ಶಿಲ್ಪಿ ಡಾ. ಬಿ. ಆರ್ ಅಂಬೇಡ್ಕರ್ ಅವರ 134 ನೇ ಜನ್ಮ ದಿನಾಚರಣೆಯ ಅಂಗವಾಗಿ ವಿಧಾನಸೌಧದ ಪೂರ್ವ ದ್ವಾರದಲ್ಲಿರುವ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡಿದರು. ಅಂಬೇಡ್ಕರ್ ಎಲ್ಲರಿಗೂ ಆರ್ಥಿಕ, ಸಾಮಾಜಿಕ, ರಾಜಕೀಯ ಸ್ವಾತಂತ್ರ್ಯ ದೊರಕಿಸಲು ಶ್ರಮಿಸಿದವರು ಎಂದೂ ಮಾತನಾಡಿದ್ದಾರೆ ಸಿಎಂ.

More