ಬಾಂಗ್ಲಾದೇಶದಲ್ಲಿರುವ ಹಿಂದೂಗಳ ರಕ್ಷಣೆಗೆ ಬದ್ಧ ಸ್ವಾತಂತ್ರ್ಯೋತ್ಸವ ಭಾಷಣೆದಲ್ಲಿ ಪ್ರಧಾನಿ ಮೋದಿ ಘೋಷಣೆ
- ರಾಜಧಾನಿ ದೆಹಲಿಯಲ್ಲಿ ಸ್ವಾತಂತ್ರ್ಯೋತ್ಸವ ಸಂಭ್ರಮ ಮನೆ ಮಾಡಿತ್ತು. 78ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿ ಕೆಂಪುಕೋಟೆಯ ಮೇಲೆ ಧ್ವಜಾರೋಹಣ ನೆರವೇರಿಸಿದ್ದಾರೆ. ಈ ವೇಳೆ ಮಾತನಾಡಿದ ಮೋದಿ ಬಾಂಗ್ಲಾದಲ್ಲಿರುವ ಹಿಂದೂಗಳ ರಕ್ಷಣೆಗೆ ಸದಾ ಸಿದ್ದ ಎಂದು ಘೋಷಿಸಿದ್ದಾರೆ. ಹಲವು ಗಣ್ಯರು ಭಾಗವಹಿಸಿದ್ದ ಹಿನ್ನೆಲೆಯಲ್ಲಿ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿತ್ತು.