ಮುಡಾ ಪ್ರಕರಣದಲ್ಲಿ ನನ್ನ ವಿರುದ್ಧ ವ್ಯವಸ್ಥಿತ ಸಂಚು; ಕಾಂಗ್ರೆಸ್‌ನ ಎಲ್ಲಾ ನಾಯಕರು, ಸಚಿವರು ನನ್ನ ಪರ ಇದ್ದಾರೆ; ಸಿಎಂ ಸಿದ್ದರಾಮಯ್ಯ
- ಸಿಎಂ ಸಿದ್ದರಾಮಯ್ಯ ಅವರ ವಿರುದ್ಧ ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಪ್ರಾಸಿಕ್ಯೂಶನ್ ತನಿಖೆಗೆ ಅನುಮತಿ ನೀಡಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿದ್ದರಾಮಯ್ಯ, ರಾಜ್ಯಪಾಲರು ದೂರು ಬಂದ ದಿನವೇ ನಮಗೆ ಶೋಕಾಸ್ ನೊಟೀಸ್ ನೀಡಿದ್ದರು. ಇದರ ಅರ್ಥವೇನು ಎಂಬುದನ್ನ ತಿಳಿಯಬೇಕು. ಕುಮಾರಸ್ವಾಮಿ, ಜೊಲ್ಲೆ, ಜನಾರ್ದನ ರೆಡ್ಡಿ ಮೇಲೆ ದೂರುಗಳಿದ್ದರೂ ಅವರಿಗೆ ಪ್ರಾಸಿಕ್ಯೂಶನ್ ಅನುಮತಿ ನೀಡಿಲ್ಲ. ಇದರ ಅರ್ಥ ಇದೊಂದು ದೊಡ್ಡ ಷಡ್ಯಂತ್ರ ಎಂದು ರಾಜ್ಯಪಾಲರು, ಬಿಜೆಪ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.