ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್ - ವಿಡಿಯೋ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್ - ವಿಡಿಯೋ

ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ತೀರ್ಪು ಕಾಯ್ದಿರಿಸಿದ ಕರ್ನಾಟಕ ಹೈಕೋರ್ಟ್ - ವಿಡಿಯೋ

Published Sep 19, 2024 06:29 PM IST Umesh Kumar S
twitter
Published Sep 19, 2024 06:29 PM IST

ಬೆಂಗಳೂರು: ಲೈಂಗಿಕ ದೌರ್ಜನ್ಯ ಮತ್ತು ಅತ್ಯಾಚಾರ ಆರೋಪ ಎದುರಿಸುತ್ತಿರುವ ಜನತಾದಳ (ಎಸ್) ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಜಾಮೀನು ಅರ್ಜಿಯ ತೀರ್ಪನ್ನು ಕರ್ನಾಟಕ ಹೈಕೋರ್ಟ್ ಗುರುವಾರ (ಸೆಪ್ಟೆಂಬರ್‌ 19) ಕಾಯ್ದಿರಿಸಿದೆ.

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠ ಈ ಹಿಂದೆ ಮೊದಲ ಪ್ರಕರಣದಲ್ಲಿ ರೇವಣ್ಣ ಅವರ ಅರ್ಜಿ ಮತ್ತು ನಂತರದ ದೂರುಗಳಿಗೆ ಸಂಬಂಧಿಸಿದ ಎರಡು ನಿರೀಕ್ಷಣಾ ಜಾಮೀನು ಅರ್ಜಿಗಳ ವಾದವನ್ನು ಆಲಿಸಿತ್ತು. ಇಂದು ವಿಚಾರಣೆಯ ಸಂದರ್ಭದಲ್ಲಿ, ಸಂತ್ರಸ್ತರ ಹೆಸರನ್ನು ನಮೂದಿಸುವುದನ್ನು ತಪ್ಪಿಸುವಂತೆ ಮತ್ತು ಅದರ ಬದಲಿಗೆ, ಪ್ರಕರಣದ ದಾಖಲೆಗಳಲ್ಲಿ ನಿರ್ದಿಷ್ಟ ವಿವರಗಳನ್ನು ಸೂಚಿಸುವಂತೆ ನ್ಯಾಯಾಲಯವು ವಕೀಲರಿಗೆ ನಿರ್ದೇಶನ ನೀಡಿತು. ಕೋರ್ಟ್‌ ಕಲಾಪದ ಒಂದು ನೋಟ ಇಲ್ಲಿದೆ.

More