ಕೋಲಾರ: ಬೆಳಗ್ಗೆ ಖುಷಿ ಖುಷಿಯಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ರು; ಸಂಜೆ ಹೊಡೆದಾಡಿಕೊಂಡು ನವ ವಧು-ವರ ಸತ್ತೇ ಹೋದ್ರು
- ಬೆಳಗ್ಗೆ ಖುಷಿಯಾಗಿ ಮದುವೆಯಾದ ನವ ಜೋಡಿ ಪರಸ್ಪರ ಗಲಾಟೆ ಮಾಡಿಕೊಂಡು ಮಚ್ಚಿನಿಂದ ಹಲ್ಲೆ ಮಾಡಿಕೊಂಡು ಸಂಜೆ ವೇಳೆಗೆ ಸಾವನ್ನಪ್ಪಿರುವ ಘಟನೆ ಕೋಲಾರ ಜಿಲ್ಲೆಯ ಕೆಜಿಎಫ್ ನ ಚಂಬರಸನಹಳ್ಳಿಯಲ್ಲಿ ನಡೆದಿದೆ. ಪರಸ್ಪರ ಪ್ರೀತಿಸಿದ್ದ ನವೀನ್ ಹಾಗೂ ಲಿಖಿತಾ ಹಠ ಮಾಡಿ ಮದುವೆಯಾಗಿದ್ದರು. ಆದರೆ ಮದುವೆಯಾದ ದಿನ ಸಂಜೆ ರೂಂಗೆ ಹೋಗಿ ಬಾಗಿಲು ಹಾಕಿಕೊಂಡ ದಂಪತಿ ಪರಸ್ಪರ ಗಲಾಟೆ ಮಾಡಿಕೊಂಡು ಹಲ್ಲೆ ಮಾಡಿಕೊಂಡಿದ್ದಾರೆ. ಘಟನೆಯಲ್ಲಿ ವಧು ಸ್ಥಳದಲ್ಲೇ ಸಾವನ್ನಪ್ಪಿದರೆ, ವರ ನವೀನ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ. ಘಟನೆಗೆ ಸ್ಪಷ್ಟ ಕಾರಣ ತಿಳಿಯದಾಗಿದ್ದು, ಪೊಲೀಸರು ತನಿಖೆ ಮುಂದುವರೆಸಿದ್ದಾರೆ.