cauvery water : ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವುದಕ್ಕೆ ಆಕ್ರೋಶ ; ಮಂಡ್ಯದಲ್ಲಿ ರೈತರ ಪ್ರತಿಭಟನೆ, ರಸ್ತೆ ತಡೆ
- ತಮಿಳುನಾಡಿಗೆ ಕಾವೇರಿ ನೀರು ಬಿಡುತ್ತಿರುವ ಹಿನ್ನೆಲೆಯಲ್ಲಿ ರೈತ ಹಿತರಕ್ಷಣಾ ಸಮಿತಿಯಿಂದ 2ನೇ ದಿನವೂ ಧರಣಿ ಮುಂದುವರಿದ್ದು ರಸ್ತೆ ತಡೆ ನಡೆಸಿದ್ದಾರೆ. ಮಂಡ್ಯದ ವಿಶ್ವೇಶ್ವರಯ್ಯ ಪ್ರತಿಮೆ ಮುಂಭಾಗ ನಡೆಯುತ್ತಿರುವ ಧರಣಿ ಸತ್ಯಾಗ್ರಹದಲ್ಲಿ ಬಾಯಿ ಬಡಿದುಕೊಂಡು ರೈತರು ಕಾವೇರಿ ನೀರು ನಿರ್ವಾಹಣಾ ಪ್ರಾಧಿಕಾರ ಹಾಗೂ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮಾಜಿ ಪರಿಷತ್ತ್ ಸದಸ್ಯ ಕೆಟಿ ಶ್ರೀಕಂಠೇಗೌಡ, ರೈತ ಮುಖಂಡರಾದ ಸುನಂದಾ ಜಯರಾಂ, ಇಂಡವಾಳು ಚಂದ್ರಶೇಖರ್, ಕನ್ನಡಸೇನೆ ಮಂಜುನಾಥ್ ಸೇರಿ ಹಲವರು ಭಾಗಿಯಾಗಿದ್ದಾರೆ. ಜೊತೆಗೆ ಮಂಡ್ಯದ ಸಂಜಯ ವೃತ್ತದಲ್ಲಿ ಹೆದ್ದಾರಿ ತಡೆ ನಡೆಸಲಾಗಿದ್ದು ಬೆಂಗಳೂರು-ಮೈಸೂರು ಹೆದ್ದಾರಿಯಲ್ಲೂ ಪ್ರತಿಭಟನೆ ನಡೆಸಲಾಗಿದೆ. ಕುಡಿಯುವ ನೀರಿಗೂ ಆಹಾಕಾರ ಎದುರಾಗಲಿದ್ದು, ಬೆಂಗಳೂರಿನವರು, ಹಾಗೂ ಚಿತ್ರನಟರೂ ಸಹ ಕಾವೇರಿ ಹೋರಾಟಕ್ಕೆ ಬರುವಂತೆ ರೈತರು ಆಗ್ರಹಿಸಿದ್ದಾರೆ.