ತುರ್ತು ಪರಿಸ್ಥಿಯ ನಿರ್ವಹಣೆ ಬಗ್ಗೆ ಗದಗದಲ್ಲಿ ಕಾರ್ಯಾಚರಣೆ – 22 ಇಲಾಖೆಗಳಿಂದ ಅಣಕು ಪ್ರದರ್ಶನ
ಭಾರತ ಮತ್ತು ಪಾಕಿಸ್ತಾನ ನಡುವಿನ ಯುದ್ದದ ಆತಂಕದಿಂದಾಗಿ ಕರ್ನಾಟಕದಲ್ಲೂ ಹೈ ಅಲರ್ಟ್ ಘೋಷಿಸಲಾಗಿದೆ. ರಾಜ್ಯ ಸರ್ಕಾರ ಎಲ್ಲಾ ಪ್ರಮುಖ ಇಲಾಖೆಗಳಿಗೆ ನಿರ್ದೇಶನ ನೀಡಿದ್ದು, ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಇನ್ನು ಕೇಂದ್ರ ಸರ್ಕಾರ ತುರ್ತು ಪರಿಸ್ಥಿತಿಯನ್ನ ನಿಭಾಯಿಸುವ ಬಗ್ಗೆ ಅಣಕು ಕಾರ್ಯಾಚರಣೆಗಳನ್ನ ಮಾಡಿ ಸಾರ್ವಜನಿಕರಿಗೆ ಮಾಹಿತಿ ನೀಡುವಂತೆ ಸೂಚಿಸಿತ್ತು. ಅದರಂತೆ ಗದಗದಲ್ಲಿ ಒಟ್ಟು 22 ಇಲಾಖೆಗಳಿಂದ ಅಣಕು ಪ್ರದರ್ಶನ ಕೈಗೊಳ್ಳಲಾಯ್ತು.