Gadag News: ಲಕ್ಷ್ಮೇಶ್ವರ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣ; 8 ವರ್ಷಗಳ ಬಳಿಕ 23 ಮಂದಿಗೆ ಶಿಕ್ಷೆ ಪ್ರಕಟ
- Gadag News: ಗದಗದ ಲಕ್ಷ್ಮೇಶ್ವರದ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ ಪ್ರಕರಣದಲ್ಲಿ 8 ವರ್ಷಗಳ ಬಳಿಕ ಶಿಕ್ಷೆ ಪ್ರಕಟವಾಗಿದೆ. ಲಕ್ಷ್ಮೇಶ್ವರದಲ್ಲಿ ಮರಳುಗಾರಿಕೆಗೆ ಸಂಬಂಧಪಟ್ಟಂತೆ ವ್ಯಕ್ತಿಯೊಬ್ಬನನ್ನ ವಶಕ್ಕೆ ಪಡೆದಿದ್ದ ಪೊಲೀಸರು, ಆತನ ಮೇಲೆ ಹಲ್ಲೆ ನಡೆಸಿದ್ದರು ಎಂಬ ಆರೋಪ ಕೇಳಿ ಬಂದಿತ್ತು. ಪೊಲೀಸರಿಂದ ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದರಿಂದ ರೊಚ್ಚಿಗೆದ್ದ ಕೆಲಪುಂಡರು ಪೊಲೀಸ್ ಠಾಣೆಗೆ ನುಗ್ಗಿ ಬೆಂಕಿ ಹಚ್ಚಿದರು. ಈ ಘಟನೆಗೆ ಸಂಬಂಧಪಟ್ಟಂತೆ ನೂರಾರು ಜನರ ಮೇಲೆ ಎಫ್ಐಆರ್ ದಾಖಲಾಗಿತ್ತು. ಪ್ರಕರಣದ ಸಮಗ್ರ ತನಿಖೆ ನಡೆಸಿರುವ ನ್ಯಾಯಾಲಯ ಎಂಟು ವರ್ಷಗಳ ಬಳಿಕ ತೀರ್ಪು ನೀಡಿದ್ದು 23 ಜನರಿಗೆ ಶಿಕ್ಷೆಯಾಗಿದೆ.