Kasturi Rangan : ಪಶ್ಚಿಮ ಘಟ್ಟದಲ್ಲಿ ಜೀವವೈವಿಧ್ಯ, ಸಸ್ಯ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ ; ಕಸ್ತೂರಿರಂಗನ್ ವರದಿ ಜಾರಿಗೆ ಆತುರವಿಲ್ಲ
- ಪಶ್ಚಿಮ ಘಟ್ಟದಲ್ಲಿ ಜೀವವೈವಿಧ್ಯ ಮತ್ತು ಸಸ್ಯ ಸಂಕುಲ ಸಂರಕ್ಷಣೆಗೆ ಸರ್ಕಾರ ಬದ್ಧ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಡಾ. ಕಸ್ತೂರಿರಂಗನ್ ವರದಿ ಜಾರಿಗೆ ಸರ್ಕಾರ ಬದ್ದ ಎಂದು ಎಲ್ಲೂ ಹೇಳಿಲ್ಲ, ಇದರ ಬಗ್ಗೆ ಅನಾವಶ್ಯಕ ಗೊಂದಲ ಹಾಗೂ ಆತಂಕ ಬೇಡ ಎಂದು ಸಚಿವರು ತಿಳಿಸಿದ್ದಾರೆ. ಕಾರ್ಯಕ್ರಮವೊಂದರಲ್ಲಿ ಕೆಲವರು ಪಶ್ಚಿಮ ಘಟ್ಟದ ಬಗ್ಗೆ ಮತ್ತು ಕಸ್ತೂರಿ ರಂಗನ್ ವರದಿ ಕುರಿತಂತೆ ಈಶ್ವರ್ ಖಂಡ್ರೆ ಅವರನ್ನ ಪ್ರಶ್ನಿಸಿದ್ದರು. ಇದಕ್ಕೆ ಉತ್ತರಿಸಿದ್ದ ಸಚಿವರು, ಕೇಂದ್ರ ಸರ್ಕಾರ ಸಂಜಯ್ ಕುಮಾರ್ ನೇತೃತ್ವದ ಪುನರ್ ಪರಿಶೀಲನಾ ಸಮಿತಿ ರಚಿಸಿದ್ದು, ಸಮಿತಿ ಸದಸ್ಯರು ತಮ್ಮನ್ನು ಇತ್ತೀಚೆಗೆ ಭೇಟಿ ಮಾಡಿದ್ದರು. ಈ ಸಮಿತಿ ಡಿಸೆಂಬರ್ ವೇಳೆಗೆ ವರದಿ ಸಲ್ಲಿಸಲಿದ್ದು, ಆ ವರದಿ ಬಂದ ಬಳಿಕ ಸಂಪುಟದ ಉಪ ಸಮಿತಿಯಲ್ಲಿ ಅದರ ಸಾಧಕ ಬಾಧಕ ಚರ್ಚಿಸಿ, ಪಶ್ಚಿಮಘಟ್ಟದ ಎಲ್ಲ ಬಾಧ್ಯಸ್ಥರೊಂದಿಗೆ (Stake holders) ಮಾತುಕತೆ ನಡೆಸಿ ನಂತರ ಸರ್ಕಾರ ವರದಿ ಕುರಿತಂತೆ ನಿರ್ಧಾರ ಕೈಗೊಳ್ಳಲಿದೆ ಎಂದು ತಿಳಿಸಿದ್ದಾಗಿ ಸ್ಪಷ್ಟಪಡಿಸಿದ್ದಾರೆ.