ಬಡತನ ರೇಖೆ ಕೆಳಗಿರುವವರ ಬಿಪಿಎಲ್ ಕಾರ್ಡ್ ರದ್ದಾಗಿದ್ದರೆ ಶೀಘ್ರವೇ ಸಮಸ್ಯೆ ಬಗೆಹರಿಸುತ್ತೇವೆ; ಸಚಿವ ದಿನೇಶ್ ಗುಂಡೂರಾವ್
ಮಂಗಳೂರು: ರಾಜ್ಯ ಸರ್ಕಾರ ಅನರ್ಹ ಬಿಪಿಎಲ್ ಕಾರ್ಡ್‌ಗಳನ್ನು ರದ್ದು ಪಡಿಸುತ್ತಿದೆ. ಸರ್ಕಾರಿ ನೌಕರರು ಹಾಗೂ ಆದಾಯ ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ ಇತರರ ಪಡಿತರ ಚೀಟಿಯನ್ನು ರದ್ದು ಮಾಡದಂತೆ ಆಹಾರ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಬಿಪಿಎಲ್ ರದ್ದುಪಡಿಸುತ್ತಿರುವ ವಿಚಾರದ ಬಗ್ಗೆ ಮಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಪ್ರತಿಕ್ರಿಯಿಸಿರುವ ಸಚಿವ ದಿನೇಶ್ ಗುಂಡೂರಾವ್, 1000 ಕಾರ್ಡ್‌ಗಳನ್ನು ರದ್ದು ಪಡಿಸಿದಾಗ ಅದರಲ್ಲಿ 5 ರಲ್ಲಿ ನಮ್ಮ ಕಡೆಯಿಂದ ತಪ್ಪಾಗಿರಬಹುದು. ಅದರನ್ನು ಸರಿಪಡಿಸುವಂತೆ ಸಿಎಂ ಸೂಚಿಸಿದ್ದಾರೆ. ಆದರೆ ಲೋಪದೋಷಗಳನ್ನು ಸರಿಪಡಿಸಲೇಬಾರದು ಎನ್ನುವುದು ಯಾವ ಲಾಜಿಕ್? ಸರ್ಕಾರದ ಹಣ ಯಾರಿಗೆ ಮುಟ್ಟಬೇಕೋ ಅವರಿಗೆ ಮುಟ್ಟಬೇಕು, ಅನರ್ಹರಿಗೆ ದೊರೆಯುತ್ತಿದ್ದರೆ ಅದನ್ನು ಗಮನಕ್ಕೆ ತರಬೇಕು ಎಂದು ದಿನೇಶ್ ಗುಂಡೂರಾವ್ ಹೇಳಿದ್ದಾರೆ.