ಜನಪ್ರತಿನಿಧಿಗಳ ಕೋರ್ಟ್‌ಗೆ ಕರೆ ತರುತ್ತಿದ್ದಂತೆ ಎಂಎಲ್‌ಸಿ ಸಿಟಿ ರವಿ ಬಿಡುಗಡೆಗೆ ಆದೇಶಿಸಿದ ಹೈಕೋರ್ಟ್
ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ವಿರುದ್ಧ ಅವಾಚ್ಯ ಪದ ಬಳಕೆ ಪ್ರಕರಣದಲ್ಲಿ ಅರೆಸ್ಟ್ ಆಗಿದ್ದ ಬಿಜೆಪಿ ವಿಧಾನಪರಿಷತ್ ಸದಸ್ಯ ಸಿಟಿ ರವಿ ಅವರನ್ನು ಜನಪ್ರತಿನಿಧಿಗಳ ವಿಶೇಷ ಕೋರ್ಟ್‌ಗೆ ಹಾಜರುಪಡಿಸಲು ಕರೆ ತರುತ್ತಿದ್ದಂತೆ ಕರ್ನಾಟಕ ಹೈಕೋರ್ಟ್, ಅವರನ್ನು ಬಿಡುಗಡೆಗೊಳಿಸುವಂತೆ ಆದೇಶಿಸಿದೆ. ಸಿಟಿ ರವಿ ವಿರುದ್ಧ ಎಫ್ಐಆರ್ ರದ್ದುಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್, ತನಿಖೆಗೆ ಸಹಕರಿಸಬೇಕೆಂದು ಷರತ್ತು ವಿಧಿಸಿ ಬಿಡುಗಡೆಗೆ ಮಧ್ಯಂತರ ಆದೇಶ ಹೊರಡಿಸಿದೆ. ಬಿಡುಗಡೆ ನಂತರ ಪ್ರತಿಕ್ರಿಯಿಸಿರುವ ಸಿಟಿ ರವಿ ಸತ್ಯಕ್ಕೆ ಜಯ ಸಿಕ್ಕಿದೆ ಎಂದಿದ್ದಾರೆ.