ಸಿದ್ದಗಂಗಾ ಶ್ರೀಗಳ 6ನೇ ಪುಣ್ಯಸ್ಮರಣೆ: ತುಮಕೂರಿನ ಮಠಕ್ಕೆ ಭೇಟಿ ನೀಡಿ ಗದ್ದುಗೆ ಪೂಜೆ ಸಲ್ಲಿಸಿದ ಗೃಹ ಸಚಿವ ಜಿ ಪರಮೇಶ್ವರ್‌
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಸಿದ್ದಗಂಗಾ ಶ್ರೀಗಳ 6ನೇ ಪುಣ್ಯಸ್ಮರಣೆ: ತುಮಕೂರಿನ ಮಠಕ್ಕೆ ಭೇಟಿ ನೀಡಿ ಗದ್ದುಗೆ ಪೂಜೆ ಸಲ್ಲಿಸಿದ ಗೃಹ ಸಚಿವ ಜಿ ಪರಮೇಶ್ವರ್‌

ಸಿದ್ದಗಂಗಾ ಶ್ರೀಗಳ 6ನೇ ಪುಣ್ಯಸ್ಮರಣೆ: ತುಮಕೂರಿನ ಮಠಕ್ಕೆ ಭೇಟಿ ನೀಡಿ ಗದ್ದುಗೆ ಪೂಜೆ ಸಲ್ಲಿಸಿದ ಗೃಹ ಸಚಿವ ಜಿ ಪರಮೇಶ್ವರ್‌

Jan 22, 2025 09:42 PM IST Rakshitha Sowmya
twitter
Jan 22, 2025 09:42 PM IST

ತುಮಕೂರು: ನಡೆದಾಡುವ ದೇವರು ಎಂದೇ ಹೆಸರಾದ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿ ಅವರ 6ನೇ ಪುಣ್ಯಸ್ಮರಣೆಯನ್ನು ಬುಧವಾರ ತುಮಕೂರಿನ ಸಿದ್ದಗಂಗಾ ಮಠದಲ್ಲಿ ಆಚರಿಸಲಾಯಿತು. ಈ ದಿನ ದಾಸೋಹ ದಿನ ಎಂದು ಆಚರಣೆ ಮಾಡಲಾಗುತ್ತಿದೆ. ಗೃಹಸಚಿವ ಜಿ ಪರಮೇಶ್ವರ್‌ ಬುಧವಾರ ಮಠಕ್ಕೆ ಭೇಟಿ ಶ್ರೀಗಳ ಗದ್ದುಗೆಗೆ ಪೂಜೆ ಸಲ್ಲಿಸಿದರು.  ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಶ್ರೀಗಳ ಕಾರ್ಯವನ್ನು ನಾವು ಎಂದಿಗೂ ಸ್ಮರಿಸಿಕೊಳ್ಳಬೇಕು. ಶ್ರೀಗಳ ಜನ್ಮಸ್ಥಳದಲ್ಲಿ ಅವರ ಪ್ರತಿಮೆ ಸ್ಥಾಪಿಸಲು ಮುಂದಿನ ಬಜೆಟ್‌ನಲ್ಲಿ ಹಣ ಮೀಸಲಿಡುವ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಚರ್ಚಿಸುತ್ತೇನೆ ಎಂದರು.

More