ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ; ಪಾಕಿಸ್ತಾನದವರು ಗಡಿಪಾರಾಗಿದ್ದಾರೆ ಎಂದ ಸಿದ್ದರಾಮಯ್ಯ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ; ಪಾಕಿಸ್ತಾನದವರು ಗಡಿಪಾರಾಗಿದ್ದಾರೆ ಎಂದ ಸಿದ್ದರಾಮಯ್ಯ

ಕೇಂದ್ರ ಸರ್ಕಾರದ ಎಲ್ಲಾ ಸೂಚನೆಗಳನ್ನು ಪಾಲಿಸಲಾಗುತ್ತಿದೆ; ಪಾಕಿಸ್ತಾನದವರು ಗಡಿಪಾರಾಗಿದ್ದಾರೆ ಎಂದ ಸಿದ್ದರಾಮಯ್ಯ

Updated May 08, 2025 09:07 PM IST Praveen Chandra B
twitter
Updated May 08, 2025 09:07 PM IST

ಪಾಕಿಸ್ತಾನದಲ್ಲಿ ಅಡಗಿರುವ ಉಗ್ರರ ನೆಲೆಗಳ ಮೇಲೆ ಭಾರತ ದಾಳಿಮಾಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೇಂದ್ರ ಸರ್ಕಾರದ ಸೂಚನೆಯಂತೆ ಎಲ್ಲೆಡೆ ಅಣುಕು ಕವಾಯತು ಮಾಡಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಅಣೆಕಟ್ಟುಗಳ ಸುರಕ್ಷತೆಯ ದೃಷ್ಟಿಯಲ್ಲಿ ಎಲ್ಲೆಡೆ ಎಚ್ಚರಿಕೆ ನೀಡಲಾಗಿದ್ದು, ಯಾವ ಘಳಿಗೆಯಲ್ಲಿ ಏನಾದರೂ ಆಗಬಹುದು ಎಂದು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು. ಪಾಕಿಸ್ತಾನದ ಪ್ರಜೆಗಳನ್ನು ಗಡಿಪಾರು ಮಾಡಿಲ್ಲ ಎಂದು ಬಿಜೆಪಿ ಆರೋಪಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಗಡಿಪಾರು ಮಾಡಲಾಗಿದೆ. ಮೈಸೂರಿನಲ್ಲಿ ಇರುವವರು ನ್ಯಾಯಾಲಯದ ಮೊರೆ ಹೋಗಿದ್ದಾರೆ. ಅಂಥವರು ಮಾತ್ರ ಉಳಿದುಕೊಂಡಿರುವುದು ಬಿಟ್ಟರೆ ಬಹುತೇಕ ಎಲ್ಲರೂ ಗಡೀಪಾರು ಆಗಿದ್ದಾರೆ, ಎಷ್ಟು ಜನ ಉಳಿದಿದ್ದಾರೆ ಎಂಬ ಮಾಹಿತಿ ಇಲ್ಲ ಎಂದು ಸಿಎಂ ಹೇಳಿದ್ದಾರೆ.

More