19ನೇ ಜಿ-20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಬ್ರೆಜಿಲ್‌ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  19ನೇ ಜಿ-20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಬ್ರೆಜಿಲ್‌ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಸಾಂಪ್ರದಾಯಿಕ ಸ್ವಾಗತ

19ನೇ ಜಿ-20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಬ್ರೆಜಿಲ್‌ ತೆರಳಿದ ಪ್ರಧಾನಿ ನರೇಂದ್ರ ಮೋದಿಗೆ ಸಾಂಪ್ರದಾಯಿಕ ಸ್ವಾಗತ

Published Nov 18, 2024 05:42 PM IST Rakshitha Sowmya
twitter
Published Nov 18, 2024 05:42 PM IST

ನವೆಂಬರ್‌ 18, 19 ರಂದು 2 ದಿನಗಳ ಕಾಲ ನಡೆಯಲಿರುವ 19ನೇ ಜಿ-20 ನಾಯಕರ ಶೃಂಗಸಭೆಯಲ್ಲಿ ಭಾಗವಹಿಸಲು ಪ್ರಧಾನಿ ನರೇಂದ್ರ ಮೋದಿ ಬ್ರೆಜಿಲ್‌ನ ರಿಯೊ ಡಿ ಜನೈರೋಗೆ ತೆರಳಿದ್ದಾರೆ. ಬ್ರೆಜಿಲ್‌ನಲ್ಲಿ ಮೋದಿ ಅವರಿಗೆ ವಿಶೇಷ ಸ್ವಾಗತ ದೊರೆತಿದೆ. ಬ್ರೆಜಿಲ್‌ನಲ್ಲಿರುವ ಭಾರತೀಯರು ಮೋದಿ ಅವರಿಗೆ ಸಾಂಪ್ರದಾಯಿಕ ನೃತ್ಯ, ಆಚರಣೆಯ ಮೂಲಕ ಸ್ವಾಗತ ಕೋರಿದ್ದಾರೆ. ಸ್ಥಳೀಯರು, ಭಾರತದ ವೇದ ವಿದ್ವಾಂಸರ ಜೊತೆ ಸೇರಿ ಮೋದಿ ಅವರ ಮುಂದೆ ಮಂತ್ರ ಪಠಣ ಮಾಡಿದ್ದಾರೆ. ನರೇಂದ್ರ ಮೋದಿ ಮಂತ್ರವನ್ನು ಆಲಿಸುತ್ತಿರುವ, ಸಾಂಪ್ರದಾಯಿಕ ನೃತ್ಯವನ್ನು ನೋಡುತ್ತಿರುವ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

More