ಕನ್ನಡ ಸುದ್ದಿ  /  Video Gallery  /  Karnataka Congress President Dk Shivakumar) Helicopter Hit By Eagle Video Pcp

Helicopter Eagle Hit Video: ಹೊಸಕೋಟೆ ಆಗಸದಲ್ಲಿ ಡಿಕೆ ಶಿವಕುಮಾರ್‌ ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ, ಕಾಪ್ಟರ್‌ ವಿಡಿಯೋ ನೋಡಿ

May 02, 2023 10:27 PM IST HT Kannada Desk
May 02, 2023 10:27 PM IST
  • ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ (DK Shivakumar) ಅವರು ಇಂದು ಮಧ್ಯಾಹ್ನ ಕೋಲಾರಕ್ಕೆ ತೆರಳುತ್ತಿದ್ದ ಹೆಲಿಕಾಪ್ಟರ್ ಗೆ ಹದ್ದು ಡಿಕ್ಕಿ (Helicopter Eagle Hit Video) ಹೊಡೆದ ಪರಿಣಾಮ ತುರ್ತು ಭೂ ಸ್ಪರ್ಶ ಮಾಡಲಾಗಿದೆ. ಹೆಲಿಕಾಪ್ಟರ್‌ಗೆ ಹದ್ದು ಡಿಕ್ಕಿ ಹೊಡೆದ ಬಳಿಕ ತುರ್ತು ಭೂಸ್ಪರ್ಶ ಮಾಡಲಾಗಿದೆ. ಆ ಸಂದರ್ಭದ ವಿಡಿಯೋ ದೃಶ್ಯ ಇಲ್ಲಿದೆ. ‘ನಾನು ನಂಬಿರುವ ಶಕ್ತಿ ಹಾಗೂ ದೇವರು ನನ್ನ ಜತೆಗಿದ್ದು, ನನ್ನನ್ನು ಕಾಪಾಡಿದ್ದಾರೆ. ನಮ್ಮ ಹೆಲಿಕಾಪ್ಟರ್ ಟೇಕಾಫ್ ಆಗಿ 7-8 ನಿಮಿಷ ಕಳೆದಿತ್ತು. ನಾವು ಹೊಸಕೋಟೆ ಹತ್ತಿರ ತಲುಪಿದಾಗ ದೊಡ್ಡ ಹದ್ದು ಬಂದು ಡಿಕ್ಕಿ ಹೊಡೆಯಿತು. ಮಾಧ್ಯಮದವರು ಪಕ್ಷದ ಪ್ರಣಾಳಿಕೆ ಕುರಿತು ಸಂದರ್ಶನ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಈ ಸಂದರ್ಭದಲ್ಲಿ ಪೈಲಟ್ ಹೆಲಿಕಾಪ್ಟರ್ ಹಾರಾಟದ ಎತ್ತರವನ್ನು ಕಡಿಮೆ ಮಾಡಿ ನಮ್ಮನ್ನು ರಕ್ಷಿಸಿದ್ದಾರೆ. ಈಗ ಬೇರೆ ಹೆಲಿಕಾಪ್ಟರ್ ಸಿಗದ ಕಾರಣ, ರಸ್ತೆ ಮಾರ್ಗವಾಗಿ ಮುಳಬಾಗಿಲಿಗೆ ತೆರಳುತ್ತಿದ್ದೇವೆ. ಇದು ಆಕಸ್ಮಿಕವಾಗಿ ಆಗಿರುವ ಘಟನೆ, ಯಾವುದೇ ಅಪಾಯವಿಲ್ಲದೇ ಸುರಕ್ಷಿತವಾಗಿ ಭೂಸ್ಪರ್ಶವಾಗಿದೆ. ಪ್ರಯಾಣದ ವೇಳೆ ಮೂರು ಹದ್ದುಗಳು ಎದುರಾಗಿದ್ದು, ಪೈಲಟ್ ಎರಡು ಹದ್ದುಗಳನ್ನು ದಾಟಿದ್ದರು. ಮೂರನೇ ಹದ್ದು ಕೆಳಗಡೆಯಿಂದ ಮೇಲೆ ಬಂದು ಡಿಕ್ಕಿ ಹೊಡೆಯಿತು. ಯಾರೂ ಇದರಿಂದ ಗಾಬರಿಯಾಗುವುದು ಬೇಡ, ಇದೊಂದು ಆಕಸ್ಮಿಕ, ಇದನ್ನು ಇಲ್ಲಿಗೆ ಬಿಟ್ಟು ಮುಂದೆ ಸಾಗೋಣ’ ಎಂದು ಘಟನೆಯ ಬಳಿಕ ಡಿಕೆ ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.
More