New year in Bangalore: ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ಕಟ್ಟೆಚ್ಚರ; ಏರಿಯಾ ಡಿಸಿಪಿಗಳಿಗೆ ಹೊಣೆಗಾರಿಕೆ ನೀಡಿದ ಗೃಹ ಸಚಿವರು
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  New Year In Bangalore: ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ಕಟ್ಟೆಚ್ಚರ; ಏರಿಯಾ ಡಿಸಿಪಿಗಳಿಗೆ ಹೊಣೆಗಾರಿಕೆ ನೀಡಿದ ಗೃಹ ಸಚಿವರು

New year in Bangalore: ಬೆಂಗಳೂರಿನಲ್ಲಿ ಹೊಸ ವರ್ಷ ಆಚರಣೆಗೆ ಕಟ್ಟೆಚ್ಚರ; ಏರಿಯಾ ಡಿಸಿಪಿಗಳಿಗೆ ಹೊಣೆಗಾರಿಕೆ ನೀಡಿದ ಗೃಹ ಸಚಿವರು

Dec 24, 2024 02:44 PM IST Umesh Kumar S
twitter
Dec 24, 2024 02:44 PM IST

New year in Bangalore: ಬೆಂಗಳೂರು ನಗರದಲ್ಲಿ ಕ್ರಿಸ್ಮಸ್ ಆಚರಣೆ ಹಾಗೂ ಹೊಸ ವರ್ಷಾಚರಣೆ ಹಿನ್ನೆಲೆಯಲ್ಲಿ ಯಾವುದೇ ಅನಾಹುತ ಸಂಭವಿಸದಂತೆ‌ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಗೃಹ ಸಚಿವ ಡಾ. ಜಿ.ಪರಮೇಶ್ವರ್ ಪೊಲೀಸ್ ಇಲಾಖೆಗೆ ಸೂಚಿಸಿದ್ದಾರೆ. ಕ್ರಿಸ್ಮಸ್ ಆಚರಣೆ ಕಾರಣ ಗುಪ್ತದಳ ಇಲಾಖೆಯೊಂದಿಗೆ ನಿರಂತರ‌ ಸಂಪರ್ಕದಲ್ಲಿರಬೇಕು. ಮಹಿಳಾ ಸುರಕ್ಷತೆಗೆ ಹೆಚ್ಚಿನ ಒತ್ತು ನೀಡಬೇಕು. ಸಣ್ಣ ಪುಟ್ಟ ಅನಾಹುತಗಳು ಸಂಭವಿಸದಂತೆ ಎಚ್ಚರಿಕೆ ವಹಿಸಬೇಕಿದೆ. ಹೊಸ ವರ್ಷ ಆಚರಿಸುವವರಿಗೆ ಆಡಚಣೆ ಮಾಡುವುದು ಬೇಡ. ಅವರಿಗೆ ಸುರಕ್ಷತೆ ನೀಡಬೇಕು. ತೊಂದರೆ ಉಂಟು ಮಾಡುವ ಕಿಡಿಗೇಡಿಗಳ ಮೇಲೆ ನಿಗಾವಹಿಸಿ ಕ್ರಮ ಜರುಗಿಸಬೇಕು ಎಂದು ಗೃಹ ಸಚಿವ ಡಾ ಜಿ ಪರಮೇಶ್ವರ್‌ ಹೇಳಿದ್ದಾರೆ.

More