ಮಂಗಳೂರು ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜು ಬಳಿ ಇದ್ದಕಿದ್ದಂತೆ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು-ವಿಡಿಯೋ-karnataka news bmw car caught fire near sahyadri engineering college mangaluru high way rsm ,ವಿಡಿಯೋ ಸುದ್ದಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮಂಗಳೂರು ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜು ಬಳಿ ಇದ್ದಕಿದ್ದಂತೆ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು-ವಿಡಿಯೋ

ಮಂಗಳೂರು ಸಹ್ಯಾದ್ರಿ ಇಂಜಿನಿಯರಿಂಗ್‌ ಕಾಲೇಜು ಬಳಿ ಇದ್ದಕಿದ್ದಂತೆ ಹೊತ್ತಿ ಉರಿದ ಬಿಎಂಡಬ್ಲ್ಯೂ ಕಾರು-ವಿಡಿಯೋ

Sep 29, 2024 09:37 AM IST Rakshitha Sowmya
twitter
Sep 29, 2024 09:37 AM IST

ಮಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಬಿಎಂಡಬ್ಲ್ಯೂ ಕಾರೊಂದು ಇದ್ದಕಿದ್ದಂತೆ ಬೆಂಕಿ ಹೊತ್ತಿ ಉರಿದಿದೆ. ಅಡ್ಯಾರ್ ಸಹ್ಯಾದ್ರಿ ಕಾಲೇಜು ಬಳಿ ಶನಿವಾರ ಮಧ್ಯಾಹ್ನ ಈ ಘಟನೆ ಸಂಭವಿಸಿದೆ. ಕಾರಿಗೆ ಬೆಂಕಿ ಹೊತ್ತಿಕೊಳ್ಳುತ್ತಿದ್ದಂತೆ ಚಾಲಕ ಕಾರು ನಿಲ್ಲಿಸಿದ್ದು ಎಲ್ಲರೂ ಹೊರ ಓಡಿ ಬಂದಿದ್ದಾರೆ. ಕೂದಲೆಳೆ ಅಂತರದಲ್ಲಿ ಮುಂದಾಗಬಹುದಾದ ಭಾರೀ ಅನಾಹುತ ತಪ್ಪಿದೆ. ಬೆಂಕಿ ನಂದಿಸಲು ಸಾಧ್ಯವಾಗದ ಕಾರಣ ಸಂಪೂರ್ಣ ಕಾರು ಸುಟ್ಟು ಕರಕಲಾಗಿದೆ. ಬೆಂಕಿಯ ತೀವ್ರತೆ ಎಷ್ಟಿತ್ತೆಂದರೆ ಸುತ್ತ ಮುತ್ತಲೂ ದಟ್ಟವಾದ ಹೊಗೆ ಆವರಿಸಿತ್ತು. ಈ ವಿಡಿಯೋ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗುತ್ತಿದೆ.

More