ಸಿಎಂ ಸಿದ್ದರಾಮಯ್ಯ ಬೆನ್ನಿಗೆ ನಿಂತ ಶಾಸಕಾಂಗ ಸಭೆ; ರಾಜ್ಯಪಾಲರ ವಿರುದ್ಧ ಡಿಕೆಶಿ ಗುಡುಗು
- ಅಕ್ರಮ ಮೂಡಾ ಸೈಟ್ ಪಡೆದಿರುವ ಆರೋಪ ಹೊತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಈಗಾಗಲೇ ರಾಜ್ಯಪಾಲರು ನ್ಯಾಯಾಂಗ ತನಿಖೆಗೆ ಅನುಮತಿ ನೀಡಿದ್ದಾರೆ. ಇದೊಂದು ರಾಜಕೀಯ ಕುತಂತ್ರವೆಂದು ಆರೋಪಿಸಿರುವ ಕಾಂಗ್ರೆಸ್, ಇದೀಗ ಸಿಎಂ ಪರವಾಗಿ ನಿಂತಿದೆ. ಈ ಬಗ್ಗೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್, ರಾಜ್ಯಪಾಲರಿಂದ ಸರ್ಕಾರವನ್ನ ಅಲುಗಾಡಿಸಲು ಸಾಧ್ಯವಿಲ್ಲ ಎಂದಿದ್ದಾರೆ.