ಹುಬ್ಬಳ್ಳಿ –ಧಾರವಾಡದಲ್ಲಿ ಮೀಟರ್ ಬಡ್ಡಿ ದಂಧೆಕೋರರ ಹೆಡೆಮುರಿ ಕಟ್ಟಿದ ಪೊಲೀಸರು
- ಹುಬ್ಬಳ್ಳಿ-ಧಾರವಾಡ ಕಮಿಷನರೇಟ್ ವ್ಯಾಪ್ತಿಯಲ್ಲಿ ಭರ್ಜರಿ ಕಾರ್ಯಾಚರಣೆ ನಡೆಸಿರುವ ಪೊಲೀಸರು, ಮೀಟರ್ ದಂಧೆಕೋರರ ಹೆಡೆಮುರಿ ಕಟ್ಟಿದ್ದಾರೆ. ಲೈಸನ್ಸ್ ಇಲ್ಲದೆ ಮೀಟರ್ ಬಡ್ಡಿ ವ್ಯವಹಾರ ಮಾಡುತ್ತಿದ್ದ 23 ಜನರ ಬಂಧನವಾಗಿದ್ದು, ಅವರಿಂದ ಸಾಲದ ವ್ಯವಹಾರದ ದಾಖಲೆಗಳು, ಚೆಕ್ ಬುಕ್, 10ಕ್ಕೂ ಹೆಚ್ಚು ಮೊಬೈಲ್, ಹತ್ತಕ್ಕೂ ಹೆಚ್ಚು ದ್ವಿಚಕ್ರ ವಾಹನ ವಶಕ್ಕೆ ಪಡೆಯಲಾಗಿದೆ.