ವಂದೇ ಭಾರತ್ ಸ್ಲೀಪರ್ ಕೋಚ್ ಅನಾವರಣ; ಗಂಟೆಗೆ 160 ಕಿಮೀ ವೇಗದ ಪ್ರಯಾಣ
- ಬಹುನಿರೀಕ್ಷಿತ ವಂದೇ ಭಾರತ್ ರೈಲಿನ ಸ್ಲೀಪರ್ ಕೋಚ್ ಮಾದರಿಯನ್ನು ಬೆಂಗಳೂರಿನಲ್ಲಿ ಅನಾವರಣಗೊಳಿಸಲಾಗಿದೆ. ಕೇಂದ್ರ ರೈಲ್ವೇ ಸಚಿವ ಅಶ್ವಿನ್ ವೈಷ್ಣವ್ ಹಾಗೂ ರಾಜ್ಯ ಖಾತೆ ಸಚಿವ ವಿ ಸೋಮಣ್ಣ ನೇತೃತ್ವದಲ್ಲಿ ಹೊಸ ಬೋಗಿಗಳನ್ನು ಅನಾವರಣಗೊಳಿಸಲಾಗಿದೆ. ವಿಶೇಷ ವಿನ್ಯಾಸ ಹಾಗೂ ಸೇಫ್ಟಿಗೆ ಆದ್ಯತೆ ನೀಡಲಾಗಿದ್ದು, ಈ ರೈಲು ಗಂಟೆಗೆ 160 ಕಿಮೀ ವೇಗದಲ್ಲಿ ಚಲಿಸಲಿದೆ.