ಕೆಪಿಸಿಸಿ ಅಧ್ಯಕ್ಷ ಬದಲಾವಣೆ ವಿಚಾರ, ಹೈಕಮಾಂಡ್‌ ನನಗೆ ಯಾವ ಸೂಚನೆಯನ್ನೂ ನೀಡಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕೆಪಿಸಿಸಿ ಅಧ್ಯಕ್ಷ ಬದಲಾವಣೆ ವಿಚಾರ, ಹೈಕಮಾಂಡ್‌ ನನಗೆ ಯಾವ ಸೂಚನೆಯನ್ನೂ ನೀಡಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

ಕೆಪಿಸಿಸಿ ಅಧ್ಯಕ್ಷ ಬದಲಾವಣೆ ವಿಚಾರ, ಹೈಕಮಾಂಡ್‌ ನನಗೆ ಯಾವ ಸೂಚನೆಯನ್ನೂ ನೀಡಿಲ್ಲ: ಸಚಿವ ಸತೀಶ್‌ ಜಾರಕಿಹೊಳಿ

Jan 17, 2025 01:33 PM IST Rakshitha Sowmya
twitter
Jan 17, 2025 01:33 PM IST

ಕೆಪಿಸಿಸಿ ಅಧ್ಯಕ್ಷ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ದಿನಗಳಿಂದ ಕಾಂಗ್ರೆಸ್‌ ವಲಯದಲ್ಲಿ ಚರ್ಚೆ ನಡೆಯುತ್ತಿದೆ. ಅಧ್ಯಕ್ಷರ ಬದಲಾವಣೆ ಕುರಿತು ಸಚಿವ ಸತೀಶ್‌ ಜಾರಕಿಹೊಳಿ ಬಹಿರಂಗ ಹೇಳಿಕೆ ಪಕ್ಷದೊಳಗಿನ ಸಂಘರ್ಷಕ್ಕೆ ಕಾರಣವಾಗಿದೆ. ಈ ವಿಚಾರವಾಗಿ ಏನೂ ಕಾಮೆಂಟ್‌ ಮಾಡದಂತೆ ಹೈಕಮಾಂಡ್‌, ಜಾರಕಿಹೊಳಿಗೆ ನೋಟಿಸ್‌ ನೀಡಿದೆ ಎಂಬ ಮಾತೂ ಕೇಳಿಬಂದಿದೆ. ಆದರೆ ಈ ವಿಚಾರವನ್ನು ಜಾರಕಿಹೊಳಿ ಹಾಗೂ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅಲ್ಲಗಳೆದಿದ್ದಾರೆ. ಬೆಳಗಾವಿ ಸಾಂಬ್ರಾ ವಿಮಾನ‌ ನಿಲ್ದಾಣದಲ್ಲಿ ಗುರುವಾರ ರಾತ್ರಿ ಮಾಧ್ಯಮಗಳ ಜೊತೆಗೆ ಮಾತನಾಡಿದ ಸತೀಶ್‌ ಜಾರಕಿಹೊಳಿ, ಮಾತನಾಡಬಾರದು ಎಂದು ಯಾರೂ ನನಗೆ ಹೇಳಿಲ್ಲ, ನನ್ನ ಮಾತುಗಳಿಂದ ಪಕ್ಷಕ್ಕೆ ಮುಜುಗರ ಆಗಬಾರದು ಎಂಬ ಕಾರಣಕ್ಕೆ ನಾನು ಸುಮ್ಮನಿಸದ್ದೇನೆ. ಅಧ್ಯಕ್ಷರ ಬದಲಾವಣೆ ವಿಚಾರ ಹೈಕಮಾಂಡ್‌ಗೆ ಬಿಟ್ಟಿದ್ದು ಎಂದಿದ್ದಾರೆ. 

More