ಮಲ್ಲಿಕಾರ್ಜುನ ಖರ್ಗೆ ಜೊತೆ ರಾಜಕಾರಣದ ಬಗ್ಗೆ ಮಾತಾಡಿಲ್ಲ,ಅವರು ನನಗೆ ಹಿರಿಯಣ್ಣ ಎಂದ ಗೃಹ ಸಚಿವ ಪರಮೇಶ್ವರ್
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮಲ್ಲಿಕಾರ್ಜುನ ಖರ್ಗೆ ಜೊತೆ ರಾಜಕಾರಣದ ಬಗ್ಗೆ ಮಾತಾಡಿಲ್ಲ,ಅವರು ನನಗೆ ಹಿರಿಯಣ್ಣ ಎಂದ ಗೃಹ ಸಚಿವ ಪರಮೇಶ್ವರ್

ಮಲ್ಲಿಕಾರ್ಜುನ ಖರ್ಗೆ ಜೊತೆ ರಾಜಕಾರಣದ ಬಗ್ಗೆ ಮಾತಾಡಿಲ್ಲ,ಅವರು ನನಗೆ ಹಿರಿಯಣ್ಣ ಎಂದ ಗೃಹ ಸಚಿವ ಪರಮೇಶ್ವರ್

Published Feb 11, 2025 10:09 AM IST Praveen Chandra B
twitter
Published Feb 11, 2025 10:09 AM IST

  • ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಭೇಟಿ ವೇಳೆ ಯಾವುದೇ ರೀತಿಯ ರಾಜಕೀಯ ಚರ್ಚೆಗಳನ್ನು ಮಾಡಿಲ್ಲ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದ್ದಾರೆ. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬ ಮತ್ತು ನಮ್ಮ ಕುಟುಂಬ ಒಂದೇ. ರಾಜಕೀಯವನ್ನು ಹೊರತುಪಡಿಸಿ ನನಗೆ ಅವರು ಹಿರಿಯ ಅಣ್ಣ ಇದ್ದ ಹಾಗೆ. ನಾನು ಆಗಾಗ್ಗೆ ಅವರನ್ನು ಭೇಟಿ ಮಾಡುತ್ತಿರುತ್ತೇನೆ. ಈ ವೇಳೆ ಕುಟುಂಬದ ವಿಚಾರಗಳನ್ನು ಮಾತಾಡುತ್ತೇವೆ. ಭೇಟಿಯಾದಾಗಲೆಲ್ಲ ರಾಜಕೀಯ ವಿಚಾರಗಳನ್ನು ಮಾತನಾಡಲು ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು. ನಿನ್ನೆ ಭೇಟಿ ವೇಳೆಯು ಸಹ ಯಾವುದೇ ರಾಜಕೀಯ ಚರ್ಚೆಯನ್ನು ಮಾಡಿಲ್ಲ. ಕುಟುಂಬದ ಅನೇಕ ವಿಚಾರಗಳನ್ನು ಮಾತಾಡಿಕೊಂಡಿದ್ದೇವೆ. ಅದಕ್ಕೆ ಹೆಚ್ಚು ವಿಶ್ಲೇಷಣೆ ಮಾಡುವ ಅಗತ್ಯವಿಲ್ಲ. ಒಂದೇ ಒಂದು ಶಬ್ದವನ್ನು ರಾಜಕೀಯದ ಬಗ್ಗೆ ಮಾತಾಡಿಲ್ಲ ಎಂದು ಹೇಳಿದರು.  ಪೂರ್ಣ ಮಾಹಿತಿಯನ್ನು ಈ ವಿಡಿಯೋದಲ್ಲಿ ಪಡೆಯಿರಿ.

More