ಕುಟುಂಬ ಸಮೇತ ಪ್ರಯಾಗ್‌ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಕುಟುಂಬ ಸಮೇತ ಪ್ರಯಾಗ್‌ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

ಕುಟುಂಬ ಸಮೇತ ಪ್ರಯಾಗ್‌ರಾಜ್‌ ಮಹಾಕುಂಭ ಮೇಳದಲ್ಲಿ ಪವಿತ್ರ ಸ್ನಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್ ಶಾ

Jan 28, 2025 05:05 PM IST Rakshitha Sowmya
twitter
Jan 28, 2025 05:05 PM IST

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾಕುಂಭ ಮೇಳಕ್ಕೆ ಪ್ರತಿದಿನ ಲಕ್ಷಾಂತರ ಭಕ್ತರು ಆಗಮಿಸುತ್ತಿದ್ದಾರೆ. ಸೆಲೆಬ್ರಿಟಿಗಳು ಕೂಡಾ ತ್ರಿವೇಣಿ ಸಂಗಮದಲ್ಲಿ ಪವಿತ್ರ ಸ್ನಾನ ಮಾಡುತ್ತಿದ್ದಾರೆ. ಸೋಮವಾರ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ಸ್ವಾಮಿ ಕೈಲಾಶಾನಂದ ಗಿರಿ, ಮತ್ತು ಸ್ವಾಮಿ ಅವಧೇಶಾನಂದ ಗಿರಿ, ಕ್ರಿಕೆಟಿಗ ಸುರೇಶ್‌ ರೈನಾ ಕೂಡಾ ಪವಿತ್ರ ಸ್ನಾನ ಮಾಡಿದರು. ಸೋಮವಾರ ಮಧ್ಯಾಹ್ನ 1 ಗಂಟೆಗೆ ಪವಿತ್ರ ಸ್ನಾನ ಮಾಡಿದ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಸೂರ್ಯನಿಗೆ ಆರ್ಘ್ಯ ಅರ್ಪಿಸಿದರು, ಜೊತೆಗೆ ಮಠಾಧೀಶರ ಮಾರ್ಗದರ್ಶನದಲ್ಲಿ ಇತರ ಧಾರ್ಮಿಕ ಆಚರಣೆಗಳನ್ನು ಪೂರ್ಣಗೊಳಿಸಿದರು. ಈ ಸಮಯದಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಅಧ್ಯಕ್ಷ, ಅಮಿತ್‌ ಶಾ ಪುತ್ರ ಜಯ್ ಶಾ ಸೇರಿದಂತೆ, ಪತ್ನಿ ಸೋನಲ್, ಸೊಸೆ ರಿಷಿತಾ ಮತ್ತು ಮೊಮ್ಮಕ್ಕಳು ಸಹ ಪೂಜೆಯಲ್ಲಿ ಪಾಲ್ಗೊಂಡಿದ್ದರು.

More