ಮಹಾಕುಂಭ ಮೇಳ 2025 ಆರಂಭ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ ಹರಿದು ಬರುತ್ತಿರುವ ಭಕ್ತರ ದಂಡು
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  ಮಹಾಕುಂಭ ಮೇಳ 2025 ಆರಂಭ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ ಹರಿದು ಬರುತ್ತಿರುವ ಭಕ್ತರ ದಂಡು

ಮಹಾಕುಂಭ ಮೇಳ 2025 ಆರಂಭ: ಉತ್ತರಪ್ರದೇಶದ ಪ್ರಯಾಗ್‌ರಾಜ್‌ಗೆ ಹರಿದು ಬರುತ್ತಿರುವ ಭಕ್ತರ ದಂಡು

Jan 13, 2025 06:48 PM IST Rakshitha Sowmya
twitter
Jan 13, 2025 06:48 PM IST

ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾಕುಂಭ ಮೇಳ ಆರಂಭವಾಗಿದೆ. 144 ವರ್ಷಗಳ ನಂತರ ಈ ಮಹಾಕುಂಭ ಮೇಳ ನಡೆಯುತ್ತಿದೆ. ಇದು ವಿಶ್ವದ ಅತಿ ದೊಡ್ಡ ಆಧ್ಯಾತ್ಮಿಕ ಸಭೆ ಎನಿಸಿಕೊಂಡಿದೆ. ಪ್ರಯಾಗ್‌ರಾಜ್‌ನಲ್ಲಿ ಗಂಗಾ, ಯುಮುನಾ, ಸರಸ್ವತಿ ನದಿಗಳು ಸೇರುವ ತ್ರಿವೇಣಿ ಸಂಗಮದಲ್ಲಿ ಸ್ನಾನ ಮಾಡುವುದರಿಂದ ಎಲ್ಲಾ ಪಾಪಗಳು ನಿವಾರಣೆಯಾಗಿ ಮೋಕ್ಷ ದೊರೆಯುತ್ತದೆ ಎಂಬ ನಂಬಿಕೆಯಿಂದ ಲಕ್ಷಾಂತರ ಭಕ್ತರು ಇಲ್ಲಿಗೆ ಬರುತ್ತಾರೆ. ಭಾರತ ಮಾತ್ರವಲ್ಲ ವಿದೇಶದಿಂದ ಕೂಡಾ ಆಧ್ಯಾತ್ಮದಲ್ಲಿ ಆಸಕ್ತಿ ಇರುವವರು ಪ್ರಯಾಗ್‌ರಾಜ್‌ಗೆ ಆಗಮಿಸುತ್ತಾರೆ. ಫೆಬ್ರವರಿ 16 ಶಿವರಾತ್ರಿವರೆಗೂ ಮಹಾಕುಂಭ ಮೇಳ ನಡೆಯಲಿದ್ದು ಪ್ರತಿದಿನ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ಬಾರಿ ಸುಮಾರು 40 ಕೋಟಿಗೂ ಹೆಚ್ಚು ಭಕ್ತರು ಈ ಮೇಳದಲ್ಲಿ ಭಾಗವಹಿಸುವ ನಿರೀಕ್ಷೆ ಇದೆ.

More