Mangalore fish festival : ಖಂಡಿಗೆ ಶ್ರೀಧರ್ಮಅರಸು ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆಯ ಅಂಗವಾಗಿ ನಂದಿನಿ ನದಿಯಲ್ಲಿ ಮೀನುಬೇಟೆ
ಹಳೆಯಂಗಡಿ ಸಮೀಪದ ಕಂಡೇವು ಎಂದು ತುಳುವಿನಲ್ಲಿ ಕರೆಯಲ್ಪಡುವ ಖಂಡಿಗೆ ಶ್ರೀಧರ್ಮಅರಸು ಉಳ್ಳಾಯ ದೈವಸ್ಥಾನದ ವಾರ್ಷಿಕ ಜಾತ್ರೆಯ ಅಂಗವಾಗಿ ನಂದಿನಿ ನದಿಯಲ್ಲಿ ಮೀನುಬೇಟೆ ನಡೆಯುತ್ತದೆ. ತುಳುವಿನ ಪಗ್ಗು ಸಂಕ್ರಮಣ ಅಂದರೆ ಮೇ ತಿಂಗಳ ಮಧ್ಯಭಾಗದಲ್ಲಿ ಇಲ್ಲಿನ ಜಾತ್ರಾಮಹೋತ್ಸವ. ಉಳ್ಳಾಯ ದೈವದ ದೈವಸ್ಥಾನದ ಮುಂಭಾಗದ ನಂದಿನಿ ಹೊಳೆಯನ್ನು ಕಂಡೇವು ಕರಿಯ ಎನ್ನುತ್ತಾರೆ. ಆದ್ದರಿಂದ ಉತ್ಸವದ ಅಂಗವಾಗಿ ನಿಗದಿಪಡಿಸಿದ ದಿನದಂದು ಇಲ್ಲಿನ ಗ್ರಾಮದ ಜನರು ಕಂಡೇವು ಕರಿಯದಲ್ಲಿ ಮೀನು ಹಿಡಿಯುತ್ತಾರೆ. ಈ ದಿನದ ಹೊರತು ಬೇರೆ ದಿನಗಳಲ್ಲಿ ಇಲ್ಲಿ ಮೀನು ಹಿಡಿಯುವುದು ನಿಷೇಧವಿದೆ. ಸಂಪ್ರದಾಯ ಮೀರಿ ಮೀನು ಹಿಡಿದರೆ ಬಲೆಗೆ ಹಾವು ಬೀಳುತ್ತದೆ ಎಂಬ ನಂಬಿಕೆಯಿದೆ.