ಬೆಂಗಳೂರು ನಗರಕ್ಕೆ ಡಾ ಮನಮೋಹನ್ ಸಿಂಗ್ ಅಪಾರ ಕೊಡುಗೆ ನೀಡಿದ್ದಾರೆ: ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಮಾಜಿ ಪ್ರಧಾನಿ ಡಾ ಮನಮೋಹನ್ ಸಿಂಗ್, ಗುರುವಾರ ರಾತ್ರಿ ದೆಹಲಿಯ ಏಮ್ಸ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರಿಗೆ 92 ವರ್ಷ ವಯಸ್ಸಾಗಿತ್ತು. ಅವರು ಪತ್ನಿ ಗುರುಶರಣ್ ಕೌರ್ ಮತ್ತು ಮೂವರು ಪುತ್ರಿಯರನ್ನು ಅಗಲಿದ್ದಾರೆ. ಮನಮೋಹನ್ ಸಿಂಗ್, 1991ರಿಂದ 1996ರ ಅವಧಿಯಲ್ಲಿ ಪಿವಿ ನರಸಿಂಹ ರಾವ್ ಸಂಪುಟದಲ್ಲಿ ಹಣಕಾಸು ಸಚಿವರಾಗಿದ್ದರು. ನಂತರ 2004 ರಿಂದ 2014ರವರೆಗೆ ಪ್ರಧಾನಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ಮಾಜಿ ಪ್ರಧಾನಿ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ. ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಕೂಡಾ ವಿಷಾದ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರೈತರ ಸಾಲ ಮನ್ನಾದಿಂದ ಹಿಡಿದು ವಿಶ್ವದ ಆರ್ಥಿಕ ತಜ್ಞರ ಪೈಕಿ ಮೇಲ್ಪಂಕ್ತಿಯಲ್ಲಿದ್ದ ಮನಮೋಹನ್ ಸಿಂಗ್, ಬೆಂಗಳೂರಿನ ಬಗ್ಗೆಯೂ ಕಾಳಜಿ ಹೊಂದಿದ್ದರು, ಬೆಂಗಳೂರಿನಲ್ಲಿ ಹಲವು ಫ್ಲೈ ಓವರ್‌ಗಳನ್ನು ನಿರ್ಮಿಸುವುದರಲ್ಲಿ ಮನಮೋಹನ್ ಸಿಂಗ್ ದೊಡ್ಡ ಕೊಡುಗೆ ನೀಡಿದ್ದರು. ಅವರ ಗೌರವಾರ್ಥ ಇಂದು ಬೆಳಗಾವಿಯಲ್ಲಿ ನಡೆಯಬೇಕಾಗಿದ್ದ ಕಾಂಗ್ರೆಸ್ ಪಕ್ಷದ ಎಲ್ಲಾ ಚಟುವಟಿಕೆಗಳು ರದ್ದಾಗಿವೆ ಎಂದು ಡಿಕೆಶಿ ತಿಳಿಸಿದ್ದಾರೆ.