ಅಧಿಕಾರ ಇದೆ ಅಂತ ನನ್ನ ಹೆದರಿಸೋಕೆ ಬರಬೇಡಿ; ಲಾರಿಗಟ್ಟಲೆ ದಾಖಲೆಗಳು ನನ್ನ ಹತ್ರ ಇವೆ; ಹೆಚ್‌ಡಿ ಕುಮಾರಸ್ವಾಮಿ ಟಾಂಗ್
- ಸಿಎಂ ಸಿದ್ದರಾಮಯ್ಯ ವಿರುದ್ಧ ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ. ಸಿಎಂ ಅಂಡ್ ಟೀಮ್ ನನ್ನ ಮಾಹಿತಿಯನ್ನು ಕೆದಕುತ್ತಿದೆ. ಆದರೆ, ಅಕ್ರಮ ಗಣಿಗಳಿಗೆ ಅನುಮತಿ ನೀಡಿದ ವಿಷಯಕ್ಕೆ ಸಂಬಂಧಿಸಿ ಸಿದ್ದರಾಮಯ್ಯ ಅವರದ್ದು ಬ್ರಹ್ಮಾಂಡವೇ ಇದೆ. ಅದಕ್ಕೆ ಸಂಬಂಧಿಸಿದ ಎಲ್ಲಾ ದಾಖಲೆಗಳೂ ನನ್ನ ಬಳಿ ಇವೆ ಎಂದು ದಾಖಲೆಗಳನ್ನು ತುಂಬಿದ್ದ ಕವರ್ ಒಂದನ್ನು ಕುಮಾರಸ್ವಾಮಿ ಅವರು ಸುದ್ದಿಗೋಷ್ಠಿಯಲ್ಲಿ ಪ್ರದರ್ಶಿಸಿದ್ದಾರೆ.