ಮುಡಾ, ವಾಲ್ಮೀಕಿ ನಿಗಮ ಪ್ರಕರಣ: ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದ್ದಾರೆ; ಸಿಎಂ ಸಿದ್ದರಾಮಯ್ಯ ಆಕ್ರೋಶ
- ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ಸಂಪೂರ್ಣವಾಗಿ ಕೇಂದ್ರ ಸರ್ಕಾರದ ಹಾಗೂ ಬಿಜೆಪಿ, ಜೆಡಿಎಸ್ ಪಕ್ಷದ ಕೈಗೊಂಬೆಯಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ. ರಾಜ್ಯಪಾಲರು ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿಗಳು ಹೆದರಿದ್ದಾರೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅಶೋಕ್ ಅವರು ಹೆದರಿರಬಹುದು, ನನಗೆ ಯಾಕೆ ಹೆದರಿಕೆಯಾಗಬೇಕು. ಕಾನೂನಿನ ರೀತ್ಯಾ ಅವರು ನೋಟಿಸ್ ನೀಡಿಲ್ಲ. ತಪ್ಪು ಮಾಡಿದ್ದರೆ ಹೆದರಬೇಕು. ನಾನು ತಪ್ಪು ಮಾಡಿಲ್ಲ ಎಂದಿದ್ದಾರೆ.