ಮೈಸೂರು ಸಮೀಪ ಚಲಿಸುತ್ತಿದ್ದ ಕಾರಿನ ಮೇಲೆ ಉರುಳಿದ ಲಾರಿ; ಓರ್ವ ಸಾವು, ಆರು ಮಂದಿ ಸ್ಥಿತಿ ಗಂಭೀರ
ಚಲಿಸುತ್ತಿದ್ದ ಕಾರಿನ ಮೇಲೆ ಲಾರಿ ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿ ಆರು ಮಂದಿಗೆ ಗಂಭೀರ ಗಾಯಗೊಂಡಿರುವ ಘಟನೆ ಮೈಸೂರು ಸಮೀಪ ನಡೆದಿದೆ. ನಂಜನಗೂಡು ತಾಲೂಕಿನ ಮೈಸೂರು-ಗುಂಡ್ಲುಪೇಟೆ ರಾಷ್ಟ್ರೀಯ ಹೆದ್ದಾರಿಯ ಸಿಂಧುವಳ್ಳಿಪುರ ಗ್ರಾಮದ ಬಳಿ ಘಟನೆ ನಡೆದಿದ್ದು, ಕಾರು ಮೈಸೂರಿನಿಂದ ಗುಂಡ್ಲುಪೇಟೆ ಬಳಿಯ ಗೋಪಾಲಸ್ವಾಮಿ ಬೆಟ್ಟಕ್ಕೆ ತೆರಳುತ್ತಿತ್ತು. ಕಾರಿನಲ್ಲಿ ತೆರಳುತ್ತಿದ್ದವರು ಮೈಸೂರು ಮೂಲದವರು ಎನ್ನಲಾಗಿದ್ದು, ಗಂಭೀರವಾಗಿ ಗಾಯಗೊಂಡಿರುವ ಆರು ಮಂದಿಗೆ ಮೈಸೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.