ಕಾಂತಾರ, ಕೆಜಿಎಫ್ ಚಾಪ್ಟರ್ 2 ಚಿತ್ರಕ್ಕೆ ರಾಷ್ಟ್ರ ಪ್ರಶಸ್ತಿ ಗರಿ; ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರು ಸಂಭ್ರಮ VIDEO
- ರಾಷ್ಟ್ರಮಟ್ಟದಲ್ಲಿ ಭಾರೀ ಸದ್ದು ಮಾಡಿದ್ದ ಕಾಂತಾರ ಹಾಗೂ ಕೆಜಿಎಫ್ ಪಾರ್ಟ್ 2 ಸಿನಿಮಾಗಳು ಹಲವು ದಾಖಲೆಗಳನ್ನ ಬರೆದಿದ್ದವು. ಇದೀಗ ಈ ಸಿನಿಮಾಗಳಿಗೆ ರಾಷ್ಟ್ರಪ್ರಶಸ್ತಿಯ ಹೆಗ್ಗಳಿಕೆ ದಕ್ಕಿದೆ. ಕೆಜಿಎಫ್ 2 ಸಿನಿಮಾ ಅತ್ಯುತ್ತಮ ಕನ್ನಡ ಸಿನಿಮಾ ಪ್ರಶಸ್ತಿ ಬಾಚಿಕೊಂಡರೆ, ಕಾಂತಾರ ಸಿನಿಮಾಗಾಗಿ ರಿಷಬ್ ಶೆಟ್ಟಿ ಅತ್ಯುತ್ತಮ ನಟ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜತೆಗೆ ಅತ್ಯುತ್ತಮ ಮನರಂಜನಾ ಚಿತ್ರ ಪ್ರಶಸ್ತಿ ಕೂಡ ಕಾಂತಾರ ಪಾಲಾಗಿದೆ. ಈ ಎರಡೂ ಸಿನಿಮಾಗಳನ್ನು ನಿರ್ಮಿಸಿದ್ದ ಹೊಂಬಾಳೆ ಸಂಸ್ಥೆಯ ವಿಜಯ್ ಕಿರಗಂದೂರು ಸಂಭ್ರಮ ವ್ಯಕ್ತಪಡಿಸಿದ್ದಾರೆ.