ಕರ್ನಾಟಕದ ಜನತೆಗೆ ಹೊಸ ವರ್ಷದ ಶುಭ ಕೋರಿ , ಬೆಂಗಳೂರು ಮುನ್ನೆಚರಿಕೆ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಜಿ ಪರಮೇಶ್ವರ್
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಹೊಸ ವರ್ಷಕ್ಕೆ ಎಲ್ಲಾ ಸಿದ್ಧತೆ ನಡೆಯುತ್ತಿದೆ. ಎಂಜಿ ರಸ್ತೆ, ಬ್ರಿಗೇಡ್, ಚರ್ಚ್ ಸ್ಟ್ರೀಟ್, ಜಯನಗರ ಸೇರಿದಂತೆ ಪ್ರಮುಖ ಸ್ಥಳಗಳಲ್ಲಿ ಹೆಚ್ಚು ಬಂದೋಬಸ್ತ್ ಮಾಡಲಾಗಿದೆ. ಯಾವುದೇ ಅಹಿತರಕರ ಘಟನೆಗಳು ನಡೆಯದಂತೆ ಮುನ್ನೆಚರಿಕೆ ಕ್ರಮ ವಹಿಸಲು ಪೊಲೀಸರನ್ನು ನಿಯೋಜಿಸಲಾಗಿದೆ. ಜೊತೆಗೆ 7500 ಕ್ಕೂ ಹೆಚ್ಚು ಸಿಸಿ ಕ್ಯಾಮೆರಾಗಳನ್ನು ಅಳವಡಿಸಲಾಗಿದ್ದು ಪೊಲೀಸರು ಹದ್ದಿನ ಕಣ್ಣಿಡಲಿದ್ದಾರೆ. ಸರ್ಕಾರ ತಡೆ ರಾತ್ರಿವರೆಗೂ ಸಾರಿಗೆ ವ್ಯವಸ್ಥೆಯನ್ನು ವಿಸ್ತರಿಸಿದ್ದು ಸಾರ್ವಜನಿಕರು ಇದರ ಲಾಭವನ್ನು ಪಡೆಯಬೇಕು ಎಂದು ಗೃಹಮಂತ್ರಿ ಜಿ ಪರಮೇಶ್ವರ್ ಮನವಿ ಮಾಡಿದ್ದಾರೆ. ಜೊತೆಗೆ ರಾಜ್ಯದ ಜನತೆಗೆ ಹೊಸ ವರ್ಷದ ಶುಭಾಶಯಗಳನ್ನು ತಿಳಿಸಿದ್ದಾರೆ.