Siddaramaiah: ಕಾವೇರಿ ವಿವಾದ ಬಗೆಹರಿಸಲು ಪ್ರಧಾನಿ ಮೋದಿ ಮಧ್ಯಪ್ರವೇಶಕ್ಕೆ ಸಿಎಂ ಆಗ್ರಹ
ಸಂಕಷ್ಟ ಸೂತ್ರ ಇಲ್ಲದಿರುವುದು ಸಮಸ್ಯೆ, ಸಂಕಷ್ಟ ಹೆಚ್ಚಲು ಕಾರಣವಾಗಿದೆ, ಕೇಂದ್ರ ಜಲ ಸಂಪನ್ಮೂಲ ಸಚಿವರ ಜತೆ ಸಭೆ ನಡೆಸುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ದೆಹಲಿಯಲ್ಲಿ ಮಾತನಾಡಿದ್ದಾರೆ. ಕಾವೇರಿ ವಿವಾದ ಸಂಬಂಧ ದೆಹಲಿಯಲ್ಲಿ ಸಂಸತ್ ಸದಸ್ಯರ ಜೊತೆಗೆ ಸಭೆಯ ಬಳಿಕ ಪತ್ರಿಕಾಗೋಷ್ಠಿ ನಡೆಸಲಾಯಿತು. ಈ ವೇಳೆ ಮಾತನಾಡಿದ ಸಿದ್ದರಾಮಯ್ಯ, ಎರಡೂ ರಾಜ್ಯದವರನ್ನು ಕರೆದು ಅಹವಾಲು ಕೇಳುವ ಅಧಿಕಾರ ವ್ಯಾಪ್ತಿ ಪ್ರಧಾನಿಯವರಿಗೆ ಇದೆ. ಹೀಗಾಗಿ ನಾವು ಪ್ರಧಾನಿ ಅವರ ಮಧ್ಯಪ್ರವೇಶಕ್ಕೆ ಮನವಿ ಮಾಡಿದ್ದೇವೆ ಎಂದರು.