ಹುಟ್ಟೂರು ಕಾಳೇನಹಳ್ಳಿಯ ಶಾಲೆಯಲ್ಲಿ ಓದದೇ ಇದ್ದರೂ ಅದೇ ಊರ ಸರ್ಕಾರಿ ಶಾಲೆಗೆ ಹೊಸ ರೂಪ ಕೊಟ್ಟ ಡಾಲಿ ಧನಂಜಯ
- ನಟ ಧನಂಜಯ್ ತಮ್ಮ ಊರಾದ ಕಾಳೇನಹಳ್ಳಿಯಲ್ಲಿ 1-7 ನೇ ತರಗತಿವರೆಗಿನ ಸರ್ಕಾರಿ ಪ್ರಾಥಮಿಕ ಶಾಲೆಗೆ ಹೈಟೆಕ್ ಸ್ಪರ್ಶ ನೀಡಲು ಮುಂದಾಗಿದ್ದಾರೆ. ಶಾಲೆಯಲ್ಲಿ ಹಾಲಿ 80 ಮಕ್ಕಳಿದ್ದಾರೆ. ತಮ್ಮ ಮದುವೆಯನ್ನು ಅರ್ಥಪೂರ್ಣಗೊಳಿಸಲು ಇಡೀ ಶಾಲೆಗೆ ಕಾಯಕಲ್ಪ ನೀಡುವ ಮೂಲಕ ಸರ್ಕಾರಿ ಶಾಲೆ ಉಳಿಸಲು ಮುಂದಾಗಿದ್ದಾರೆ. ತಾವು ಈ ಶಾಲೆಯಲ್ಲಿ ಓದದೇ ಇದ್ದರೂ ಕೂಡ ತಮ್ಮೂರಿನ ಶಾಲೆ ಚೆನ್ನಾಗಿರಬೇಕು ಹಾಗೂ ಮಕ್ಕಳು ಉತ್ತಮ ವಾತಾವರಣದಲ್ಲಿ ಕಲಿಯಬೇಕು ಅನ್ನೋದು ಡಾಲಿಯವರ ಉದ್ದೇಶವಾಗಿದೆ. ಧನಂಜಯ ಅವರ ಈ ಕೆಲಸಕ್ಕೆ ಊರಿನ ಗ್ರಾಮಸ್ಥರು ಮೆಚ್ಚುಗೆ ವ್ಯಕ್ತ ಪಡಿಸಿದ್ದಾರೆ. ಇದಕ್ಕಾಗಿ ಲಕ್ಷಾಂತರ ರೂಪಾಯಿಗಳು ಖರ್ಚಾಗುತ್ತಿದ್ದು ನಟ ಡಾಲಿ ಹಣದ ಬಗ್ಗೆ ತಲೆ ಕೆಡಿಸಿಕೊಳ್ಳದೇ ಶಾಲೆ ಬೇಕಿರೋ ಎಲ್ಲಾ ರೀತಿಯ ವ್ಯವಸ್ಥೆ ಮಾಡಿ ಎಂದಿದ್ದಾರೆ.