Darshan jail viral Video: ದರ್ಶನ್‌ಗೆ ಜೈಲಿನಲ್ಲಿ ರಾಜಾತಿಥ್ಯ; ಪರಪ್ಪನ ಅಗ್ರಹಾರಕ್ಕೆ ಗೃಹಸಚಿವ ಭೇಟಿ, ಅಧಿಕಾರಿಗಳಿಗೆ ತರಾಟೆ- ವಿಡಿಯೋ
- Darshan jail viral Video: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಜೈಲಿನಲ್ಲಿರುವ ನಟ ದರ್ಶನ್‌ಗೆ ರಾಜಾತಿಥ್ಯ ದೊರಕುತ್ತಿದೆ ಎಂಬ ಫೋಟೋ, ವಿಡಿಯೋ ವೈರಲ್ ಆದ ಬಳಿಕ ಗೃಹಸಚಿವ ಜಿ. ಪರಮೇಶ್ವರ ಅವರು ಬೆಂಗಳೂರು ಜೈಲಿಗೆ ಭೇಟಿ ನೀಡಿ ಅಧಿಕಾರಿಗಳಿಗೆ ಫುಲ್ ಕ್ಲಾಸ್ ತೆಗೆದುಕೊಂಡಿದ್ದಾರೆ. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಟ ದರ್ಶನ್‌ಗೆ ವಿಶೇಷ ಸತ್ಕಾರ ನೀಡಿರುವ ಪ್ರಕರಣ ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಕೈದಿಗಳ ದೈನಂದಿನ ಚಟುವಟಿಕೆ ಮೇಲೆ ನಿಗಾವಹಿಸದಿರುವುದು, ಪ್ರಮುಖ ಪ್ರಕರಣಗಳ ಆರೋಪಿಗಳ ಭೇಟಿ ಮಾಡಿ ಹೋದ ನಂತರ ಸಿಸಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲನೆ ನಡೆಸದಿರುವುದಕ್ಕೆ ಜೈಲಿನ ಚೀಫ್ ಸೂಪರಿಂಟ್‌ಡೆಂಡ್, ಸೂಪರಿಡೆಂಟ್ ಹಾಗೂ ಮತ್ತಿತರ ಜೈಲು ಅಧಿಕಾರಿಗಳನ್ನು ತೀವ್ರ ತರಾಟೆಗೆ ತೆಗೆದುಕೊಂಡರು. ನಿಯಮಗಳನ್ನು ಮೀರಿ ಆರೋಪಿಗಳಿಗೆ ಟೀ, ಸಿಗರೇಟ್ ಮತ್ತಿತರ ಸವಲತ್ತುಗಳನ್ನು ಪೂರೈಕೆಯಾಗಿದೆ. ದಿನದ 24 ಗಂಟೆಯೂ ವಾರ್ಡರ್‌ಗಳು ಕರ್ತವ್ಯದಲ್ಲಿರುತ್ತಾರೆ. ಘಟನೆ ಎಲ್ಲರ ಕಣ್ತಪ್ಪಿ ನಡೆಯಲು ಹೇಗೆ ಸಾಧ್ಯ ಎಂದು ಅಧಿಕಾರಿಗಳನ್ನು ಪ್ರಶ್ನಿಸಿದರು.