ಪ್ರಜ್ವಲ್ ದೇವರಾಜ್ ನಟನೆಯ ರಾಕ್ಷಸ ಚಿತ್ರದ ಟ್ರೇಲರ್ ಬಿಡುಗಡೆ
- ಮಮ್ಮಿ ಸಿನಿಮಾ ಖ್ಯಾತಿಯ ನಿರ್ದೇಶಕ ಲೋಹಿತ್ ಬ್ಯಾಕ್ ಟು ಬ್ಯಾಕ್ ಸಿನಿಮಾಗಳಲ್ಲಿ ಬಿಜಿಯಾಗಿದ್ದಾರೆ. ಇದೀಗ ಇದೇ ನಿರ್ದೇಶಕರ ರಾಕ್ಷಸ ಸಿನಿಮಾದ ಟ್ರೇಲರ್ ಬಿಡುಗಡೆ ಆಗಿದೆ. ನಟ ಪ್ರಜ್ವಲ್ ದೇವರಾಜ್ ಈ ಚಿತ್ರದಲ್ಲಿ ಹೊಸ ಅವತಾರದಲ್ಲಿ ಗಮನ ಸೆಳೆದಿದ್ದಾರೆ. ಹಾರರ್ ಥ್ರಿಲ್ಲರ್ ಜತೆಗೆ ಟೈಮ್ ಟ್ರಾವೆಲಿಂಗ್ ಪರಿಕಲ್ಪನೆಯಲ್ಲಿ ಈ ಸಿನಿಮಾ ಮೂಡಿಬಂದಿದೆ. ಇನ್ನೇನು ಶೀಘ್ರದಲ್ಲಿ ಈ ಚಿತ್ರದ ಅಧಿಕೃತ ಬಿಡುಗಡೆ ದಿನಾಂಕ ಘೋಷಣೆ ಆಗಲಿದೆ. ಶಾನ್ವಿ ಎಂಟರ್‌ಟೈನ್‌ಮೆಂಟ್ಸ್ ಬ್ಯಾನರ್‌ನಲ್ಲಿ ಈ ಚಿತ್ರ ನಿರ್ಮಾಣವಾಗಿದೆ.