Siddaramaiah : ಮನುಷ್ಯರು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲದ ಸುಳ್ಳುಗಳನ್ನು ಮೋದಿ-ಶಾ ನೀರು ಕುಡಿದಷ್ಟೆ ಸಲೀಸಾಗಿ ಹೇಳುತ್ತಾರೆ
ಕನ್ನಡ ಸುದ್ದಿ  /  ವೀಡಿಯೊ ಗ್ಯಾಲರಿ  /  Siddaramaiah : ಮನುಷ್ಯರು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲದ ಸುಳ್ಳುಗಳನ್ನು ಮೋದಿ-ಶಾ ನೀರು ಕುಡಿದಷ್ಟೆ ಸಲೀಸಾಗಿ ಹೇಳುತ್ತಾರೆ

Siddaramaiah : ಮನುಷ್ಯರು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲದ ಸುಳ್ಳುಗಳನ್ನು ಮೋದಿ-ಶಾ ನೀರು ಕುಡಿದಷ್ಟೆ ಸಲೀಸಾಗಿ ಹೇಳುತ್ತಾರೆ

Published May 01, 2024 06:16 PM IST Prashanth BR
twitter
Published May 01, 2024 06:16 PM IST

  • ಮನುಷ್ಯರು ಕಲ್ಪಿಸಿಕೊಳ್ಳುವುದಕ್ಕೂ ಸಾಧ್ಯವಿಲ್ಲದ ಸುಳ್ಳುಗಳನ್ನು ಬಿಜೆಪಿಯವರು  ನೀರು ಕುಡಿದಷ್ಟೆ ಸಲೀಸಾಗಿ ಹೇಳುತ್ತಾರೆ. ಇವರ ಸುಳ್ಳುಗಳನ್ನು ನಂಬಿ ಹತ್ತತ್ತು ವರ್ಷ ಮೋಸ ಹೋಗಿದ್ದು ಸಾಕು. ಇನ್ನೂ ಎಷ್ಟು ವರ್ಷ ಬಿಜೆಪಿಯ ಸುಳ್ಳುಗಳಿಗೆ ಮೋಸ ಹೋಗ್ತೀರಿ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ. ರಾಯಚೂರಿನ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು ಮೊದಲ ಮತ್ತು ಎರಡನೆ ಹಂತದ ಚುನಾವಣೆಗಳಲ್ಲಿ ಬಿಜೆಪಿ ಸೋಲುತ್ತದೆ ಎನ್ನುವುದು ಮೋದಿಗೆ ಸ್ಪಷ್ಟವಾಗಿ ಗೊತ್ತಾಗಿದೆ. ಬಿಜೆಪಿಯವರೇ ಮಾಡಿಸಿರುವ ಸಮೀಕ್ಷೆಯಲ್ಲೇ ಅವರಿಗೆ ಸೋಲು ಕಟ್ಟಿಟ್ಟ ಬುತ್ತಿ. ರಾಷ್ಟ್ರ ಮಟ್ಟದಲ್ಲಿ ಬಿಜೆಪಿ 200 ಸೀಟು ಗೆದ್ದರೆ ಹೆಚ್ಚು ಎನ್ನುವಂತಹ ಸ್ಥಿತಿ ಇದೆ. ಹೀಗಾಗಿ ಸೋಲಿಗೆ ಹೆದರಿ ಮೋದಿ, ಶಾ, ರಾಜುಗೌಡ ಭರ್ಜರಿ ಸುಳ್ಳುಗಳನ್ನು ಹೇಳುತ್ತಿದ್ದಾರೆ. ಈ ಸುಳ್ಳುಗಳಿಗೆ ಮರುಳಾಗಬೇಡಿ ಎಂದು ಸಿಎಂ ಹೇಳಿದ್ದಾರೆ. 

More