Congress: ವಿಧಾನಸೌಧದ ಮುಂದೆ ಗೋಮೂತ್ರ ಸಿಂಪಡಿಸಿದ ಕಾಂಗ್ರೆಸ್ ಕಾರ್ಯಕರ್ತರಿಂದ ವಿಶೇಷ ಪೂಜೆ
ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮೂರು ದಿನಗಳ (ಮೇ 21, 22, 23) ವಿಧಾನಸಭೆ ಅಧಿವೇಶನ ನಡೆಯುತ್ತಿದೆ. ಕಲಾಪ ಆರಂಭಕ್ಕೂ ಮುನ್ನ ಕಾಂಗ್ರೆಸ್ ಕಾರ್ಯಕರ್ತರು ವಿಧಾನಸೌಧದ ಮುಂಭಾಗ ಗೋಮೂತ್ರ ಸಿಂಪಡಿಸಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಬಿಜೆಪಿ ಭ್ರಷ್ಟಾಚಾರದಿಂದ ವಿಧಾನಸಭೆಯನ್ನು ಅಪವಿತ್ರಗೊಳಿಸಿದೆ ಎಂದು ಕಾಂಗ್ರೆಸ್ ಆರೋಪ ಮಾಡಿದ್ದಾರೆ. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.