ತುಂಗಭದ್ರಾ ಜಲಾಶಯದ ಕ್ರೆಸ್ಟ್ ಗೇಟ್ ಕೊಚ್ಚಿ ಹೋದ ಪ್ರಕರಣ; ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಸಭೆ, ನಾಳೆ ಸ್ಥಳಪರಿಶೀಲನೆ
ಬೆಂಗಳೂರು: ತುಂಗಭದ್ರಾ ಜಲಾಶಯದ ಕ್ರಸ್ಟ್ ಗೇಟ್‌ನ ಚೈನ್ ಲಿಂಕ್ ಮುರಿದ ಘಟನೆ ಹಿನ್ನೆಲೆಯಲ್ಲಿ ನೀರಾವರಿ ಇಲಾಖೆ ಅಧಿಕಾರಿಗಳೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಚರ್ಚೆ ನಡೆಸಿದರು. ಇಂದು ಅವರು ತುಂಗಭದ್ರಾ ಜಲಾಶಯಕ್ಕೆ ಭೇಟಿ , ಪರಿಶೀಲನೆ ನಡೆಸಲಿದ್ದಾರೆ.
ಈ ನಡುವೆ, ಅಣೆಕಟ್ಟಿನ ರಚನೆಗೆ ಹಾನಿಯಾಗುವ ಸಾಧ್ಯತೆಯಿರುವುದರಿಂದ ಎಲ್ಲಾ ಗೇಟ್‌ಗಳನ್ನು ತೆರೆಯಲಾಗಿದ್ದು, ಅಲ್ಲಿಂದ 38 ಸಾವಿರ ಕ್ಯೂಸೆಕ್ ನೀರನ್ನು ನೆರೆಯ ಆಂಧ್ರಪ್ರದೇಶ ಮತ್ತು ತೆಲಂಗಾಣಕ್ಕೆ ಬಿಡಲಾಗುತ್ತಿದೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿಳಿಸಿದ್ದಾರೆ.
ಜಲಾಶಯಕ್ಕೆ ಒಳಹರಿವು 28,000 ಕ್ಯೂಸೆಕ್ ಇದ್ದು, ತೆಲಂಗಾಣಕ್ಕೂ ನೀರು ಬಿಡುವ ಬಗ್ಗೆ ಮಾಹಿತಿ ನೀಡಲಾಗಿದೆ. 38,000 ಕ್ಯೂಸೆಕ್ ನೀರಿನಲ್ಲಿ 35,000 19 ನೇ ಗೇಟ್‌ನಿಂದ ಹರಿಯುತ್ತಿದೆ. 70 ವರ್ಷ ಹಳೆಯ ಅಣೆಕಟ್ಟು 12 ಲಕ್ಷ ಎಕರೆ ಭೂಮಿಗೆ ನೀರುಣಿಸುತ್ತದೆ. ಕರ್ನಾಟಕ, ಆಂಧ್ರಪ್ರದೇಶ ಮತ್ತು ತೆಲಂಗಾಣ ಮೂರು ರಾಜ್ಯಗಳ ಆಡಳಿತದಲ್ಲಿರುವ ಈ ಅಣೆಕಟ್ಟಿಗೆ ಪ್ರತ್ಯೇಕ ಪ್ರಾಧಿಕಾರವಿದೆ ಎಂದು ಡಿಕೆ ಶಿವಕುಮಾರ್ ವಿವರಿಸಿದ್ದಾರೆ.